ಯಾಜಕಕಾಂಡ 4:24

ಅವನು ತನ್ನ ಕೈಯನ್ನು ಆ ಮೇಕೆ ತಲೆಯ ಮೇಲೆ ಇಟ್ಟು ಕರ್ತನ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು; ಅದು ಪಾಪದ ಬಲಿಯಾಗಿರುವದು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 4

22ಒಬ್ಬ ಅಧಿಪತಿಯು ಪಾಪಮಾಡಿ ತನ್ನ ದೇವ ರಾದ ಕರ್ತನ ಆಜ್ಞೆಗಳಿಗೆ ವಿರೋಧವಾಗಿ ತಿಳಿಯದೆ ಮಾಡಬಾರದವುಗಳನ್ನು ಮಾಡಿ ಅಪರಾಧಿಯಾಗಿದ್ದರೆ,

23ಇಲ್ಲವೆ ಅವನು ಮಾಡಿದ ಆ ಪಾಪವು ಅವನಿಗೆ ತಿಳಿದು ಬಂದರೆ, ಅವನು ಬಲಿಗಾಗಿ ಮೇಕೆಗಳಲ್ಲಿ ದೋಷವಿಲ್ಲದ ಒಂದು ಗಂಡು ಮರಿಯನ್ನು ತರಬೇಕು.

24ಅವನು ತನ್ನ ಕೈಯನ್ನು ಆ ಮೇಕೆ ತಲೆಯ ಮೇಲೆ ಇಟ್ಟು ಕರ್ತನ ಮುಂದೆ ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ಅದನ್ನು ವಧಿಸಬೇಕು; ಅದು ಪಾಪದ ಬಲಿಯಾಗಿರುವದು.

25ಯಾಜಕನು ಪಾಪದ ಬಲಿಯ ರಕ್ತವನ್ನು ತನ್ನ ಬೆರಳಿನಿಂದ ತೆಗೆದುಕೊಂಡು ದಹನಬಲಿ ಯಜ್ಞವೇದಿಯ ಕೊಂಬುಗಳ ಮೇಲೆ ಹಚ್ಚಿ ಅದರ ರಕ್ತವನ್ನು ದಹನಬಲಿ ಯಜ್ಞವೇದಿಯ ಅಡಿಯಲ್ಲಿ ಹೊಯ್ಯಬೇಕು.

26ಅವರು ಸಮಾಧಾನದ ಯಜ್ಞ ಸಮರ್ಪಣೆಯ ಕೊಬ್ಬಿನಂತೆಯೇ ಅದರ ಎಲ್ಲಾ ಕೊಬ್ಬನ್ನು ಯಜ್ಞವೇದಿಯ ಮೇಲೆ ಸುಡಬೇಕು. ಯಾಜ ಕನು ಅವನ ಪಾಪದ ವಿಷಯದಲ್ಲಿ ಅವನಿಗೆ ಪ್ರಾಯಶ್ಚಿತ್ತ ಮಾಡಬೇಕು; ಆಗ ಅದು ಅವನಿಗೆ ಕ್ಷಮಿಸಲ್ಪಡುವದು.

ಯಾಜಕಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी