ಓಬದ್ಯ 1:16

ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವವು; ಹೌದು, ಕುಡಿದು ನುಂಗಿಬಿಡುವವು; ಇಲ್ಲದೆ ಇದ್ದವರ ಹಾಗೆಯೇ ಇರುವವು.

ಸಂದರ್ಭದೊಂದಿಗೆ ಓದಿ · ಓಬದ್ಯ 1

14ಅವನಲ್ಲಿ ಓಡಿ ಹೋದವರನ್ನು ಕಡಿದುಬಿಡುವದಕ್ಕೆ ನೀನು ಕೂಡುವ ದಾರಿಯಲ್ಲಿ ನಿಲ್ಲಬಾರದಾಗಿತ್ತು; ಕಷ್ಟದ ದಿನದಲ್ಲಿ ಅವನಲ್ಲಿ ಉಳಿದುಕೊಂಡವರನ್ನು ಒಪ್ಪಿಸಬಾರದಾಗಿತ್ತು.

15ಕರ್ತನ ದಿನವು ಎಲ್ಲಾ ಜನಾಂಗಗಳ ಮೇಲೆ ಸವಿಾಪವಾಗಿದೆ; ನೀನು ಮಾಡಿದ ಹಾಗೆಯೇ ನಿನಗೆ ಮಾಡಲ್ಪಡುವದು; ನಿನ್ನ ಪ್ರತಿಫಲವು ನಿನ್ನ ತಲೆಯ ಮೇಲೆ ತಿರುಗುವದು.

16ನೀವು ನನ್ನ ಪರಿಶುದ್ಧ ಪರ್ವತದ ಮೇಲೆ ಕುಡಿದ ಹಾಗೆಯೇ ಜನಾಂಗಗಳೆಲ್ಲಾ ನಿತ್ಯವಾಗಿ ಕುಡಿಯುವವು; ಹೌದು, ಕುಡಿದು ನುಂಗಿಬಿಡುವವು; ಇಲ್ಲದೆ ಇದ್ದವರ ಹಾಗೆಯೇ ಇರುವವು.

17ಆದರೆ ಚೀಯೋನ್‌ ಪರ್ವತದಲ್ಲಿ ಬಿಡುಗಡೆ ಇರುವದು, ಅದು ಪರಿಶುದ್ಧ ವಾಗಿರುವದು; ಯಾಕೋಬಿನ ಮನೆತನದವರು ತಮ್ಮ ಸ್ವಾಸ್ತ್ಯಗಳನ್ನು ಸ್ವತಂತ್ರಿಸಿಕೊಳ್ಳುವರು.

18ಇದಲ್ಲದೆ ಯಾಕೋಬಿನ ಮನೆತನದವರು ಬೆಂಕಿಯಾಗಿಯೂ ಯೋಸೇಫನ ಮನೆತನದವರು ಜ್ವಾಲೆಯಾಗಿಯೂ ಇರುವರು; ಏಸಾವನ ಮನೆತನದವರು ಕೂಳೆಯಾಗು ವರು. ಅವರು ಹೊತ್ತಿಸಿ ಇವರನ್ನು ತಿಂದುಬಿಡುವರು; ಏಸಾವನ ಮನೆತನದವರಿಗೆ ಯಾರೂ ಉಳಿಯರು; ಕರ್ತನೇ ಅದನ್ನು ನುಡಿದಿದ್ದಾನೆ.

ಓಬದ್ಯ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी