೨ ಸಮುವೇಲನು 9:7

ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 9

5ಅರಸನಾದ ದಾವೀದನು ಅವ ನನ್ನು ಆಗ ಲೋದೆಬಾರಿನಲ್ಲಿರುವ ಅವ್ಮೆಾಯೇಲನ ಮಗನಾದ ಮಾಕೀರನ ಮನೆಯಿಂದ ಕರೆಕಳುಹಿ ಸಿದನು.

6ಸೌಲನ ಮಗನಾಗಿರುವ ಯೋನಾತಾನನ ಮಗನಾದ ಮೆಫೀಬೋಶೆತನು ದಾವೀದನ ಬಳಿಗೆ ಬಂದು ಸಾಷ್ಟಾಂಗನಮಸ್ಕಾರಮಾಡಿದನು.

7ದಾವೀ ದನು--ಮೆಫೀಬೋಶೆತನೇ ಅಂದನು. ಅವನು--ಇಗೋ, ನಿನ್ನ ದಾಸನು ಅಂದನು. ಆಗ ದಾವೀದನು ಅವನಿಗೆ -- ಭಯಪಡಬೇಡ, ನಿನ್ನ ತಂದೆಯಾದ ಯೋನಾತಾನನ ನಿಮಿತ್ತ ನಾನು ನಿನಗೆ ಖಂಡಿತವಾಗಿ ದಯೆತೋರಿಸುವೆನು. ನಿನ್ನ ತಂದೆಯಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ತಿರಿಗಿ ಕೊಡುವೆನು ನೀನು ನನ್ನ ಮೇಜಿನಲ್ಲಿ ನಿತ್ಯವೂ ಭೋಜನ ಮಾಡುವಿ ಅಂದನು.

8ಆಗ ಅವನು ಅಡ್ಡಬಿದ್ದು--ನೀನು ನನ್ನಂಥ ಸತ್ತನಾಯಿಯನ್ನು ದೃಷ್ಟಿಸುವ ಹಾಗೆ ನಿನ್ನ ದಾಸನು ಎಷ್ಟರವನು ಅಂದನು.

9ಆಗ ಅರಸನು ಸೌಲನ ದಾಸನಾದ ಚೀಬನನ್ನು ಕರೆದು ಅವನಿಗೆ--ನಾನು ಸೌಲನಿಗೂ ಅವನ ಎಲ್ಲ ಮನೆಗೂ ಹೊಂದಿದ ಎಲ್ಲವನ್ನೂ ನಿನ್ನ ಯಜಮಾನನ ಮಗನಿಗೆ ಕೊಟ್ಟಿದ್ದೇನೆ.

೨ ಸಮುವೇಲನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी