ಮೂಡಣ ಬಾಗಿಲಿನ ಪ್ರವೇಶದ ಬಳಿಯಲ್ಲಿ ಹಿನ್ನೋಮನ ಮಗನ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು.
1ಕರ್ತನು ಹೀಗೆ ಹೇಳುತ್ತಾನೆ--ಹೋಗಿ, ಕುಂಬಾರನ ಮಣ್ಣಿನ ಕೂಜೆಯನ್ನು ತಕ್ಕೊಂಡು, ಜನರ ಹಿರಿಯರಿಂದಲೂ ಯಾಜಕರ ಹಿರಿಯರಿಂದಲೂ ಕೆಲವರನ್ನು ಕರಕೊಂಡು
2ಮೂಡಣ ಬಾಗಿಲಿನ ಪ್ರವೇಶದ ಬಳಿಯಲ್ಲಿ ಹಿನ್ನೋಮನ ಮಗನ ತಗ್ಗಿಗೆ ಹೋಗಿ, ನಾನು ನಿನಗೆ ಹೇಳುವ ಮಾತುಗಳನ್ನು ಅಲ್ಲಿ ಸಾರಿ ಹೇಳು.
3ಓ ಯೆಹೂದದ ಅರಸರೇ, ಯೆರೂಸಲೇಮಿನ ನಿವಾಸಿಗಳೇ, ಕರ್ತನ ವಾಕ್ಯವನ್ನು ಕೇಳಿರಿ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗನ್ನುತ್ತಾನೆ--ಇಗೋ, ನಾನು ಈ ಸ್ಥಳದ ಮೇಲೆ ಕೇಡನ್ನು ಬರಮಾಡುತ್ತೇನೆ; ಅದನ್ನು ಕೇಳುವವ ರೆಲ್ಲರ ಕಿವಿಗಳು ಗುಂಯ್ಗುಟ್ಟುವವು.
4ಅವರು ನನ್ನನ್ನು ಬಿಟ್ಟು ಈ ಸ್ಥಳವನ್ನು ಪರಸ್ಥಳ ಮಾಡಿ, ಅವರೂ ಅವರ ತಂದೆಗಳೂ ಯೆಹೂದದ ಅರಸರೂ ಅರಿಯದ ಬೇರೆ ದೇವರುಗಳಿಗೆ ಅಲ್ಲಿ ಧೂಪಸುಟ್ಟು ಈ ಸ್ಥಳವನ್ನು ಅಪರಾಧವಿಲ್ಲದವರ ರಕ್ತ ದಿಂದ ತುಂಬಿಸಿ
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ