ಇತರರ ಭಾರವು ಪರಿಹಾರವಾಗ ಬೇಕೆಂದೂ ನಿಮಗೆ ಭಾರವಾಗಬೇಕೆಂದೂ ನನ್ನ ತಾತ್ಪರ್ಯವಲ್ಲ.
11ಈ ಕಾರ್ಯವನ್ನು ಮಾಡುವದಕ್ಕೆ ಹೇಗೆ ನಿಮ್ಮಲ್ಲಿ ಸಿದ್ದಮನಸ್ಸು ಇತ್ತೋ ಹಾಗೆಯೇ ನೆರವೇರಿಸಿರಿ; ಹೀಗೆ ನಿಮಗಿರುವದರೊಳಗಿಂದ ಆ ಕಾರ್ಯವನ್ನು ಪೂರ್ತಿ ಮಾಡಿರಿ.
12ಒಬ್ಬನು ಕೊಡುವದಕ್ಕೆ ಮನಸ್ಸಿದ್ದರೆ ಅವನು ತನಗೆ ಇಲ್ಲದ್ದಕ್ಕನುಸಾರವಾಗಿ ಅಲ್ಲ, ಆದರೆ ಇರುವದಕ್ಕನುಸಾರವಾಗಿಯೇ ಕೊಟ್ಟರೆ ಅದು ಸಮರ್ಪ ಕವಾಗಿರುವದು.
13ಇತರರ ಭಾರವು ಪರಿಹಾರವಾಗ ಬೇಕೆಂದೂ ನಿಮಗೆ ಭಾರವಾಗಬೇಕೆಂದೂ ನನ್ನ ತಾತ್ಪರ್ಯವಲ್ಲ.
14ಸಮಾನತ್ವವಿರಬೇಕೆಂದೇ ನನ್ನ ತಾತ್ಪರ್ಯ. ಸದ್ಯಕ್ಕೆ ನಿಮ್ಮ ಸಮೃದ್ಧಿಯು ಅವರ ಕೊರತೆ ಯನ್ನು ನೀಗಿಸುತ್ತದೆ; ಮುಂದೆ ಅವರ ಸಮೃದ್ಧಿಯು ನಿಮ್ಮ ಕೊರತೆಯನ್ನು ನೀಗಿಸುವದು; ಹೀಗೆ ಸಮಾನತ್ವವುಂಟಾಗುವದು.
15ಬಹಳ ಕೂಡಿಸಿದವನಿಗೆ ಏನೂ ಹೆಚ್ಚಾಗಲಿಲ್ಲ; ಸ್ವಲ್ಪವಾಗಿ ಕೂಡಿಸಿದವನಿಗೆ ಏನೂ ಕಡಿಮೆಯಾಗಲಿಲ್ಲ ಎಂದು ಬರೆದಿರುವ ಪ್ರಕಾರವಾಗುವದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ