ಅರಣ್ಯಕಾಂಡ 7:3

ಅವರು ಕರ್ತನ ಎದುರಿನಲ್ಲಿ ತಂದ ಅರ್ಪಣೆ ಏನಂದರೆ--ಆರು ಕಮಾನು ಬಂಡಿ ಗಳೂ ಹನ್ನೆರಡು ಎತ್ತುಗಳೂ ಪ್ರಧಾನರಲ್ಲಿ ಇಬ್ಬರಿಗೆ ಒಂದು ಬಂಡಿಯನ್ನೂ, ಒಬ್ಬೊಬ್ಬನಿಗೆ ಒಂದೊಂದು ಎತ್ತನ್ನೂ ಅವರು ಗುಡಾರದ ಮುಂದೆ ತಂದರು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 7

1ಮೋಶೆಯು ಗುಡಾರವನ್ನು ನಿಲ್ಲಿಸಿಅಭಿಷೇಕಿಸಿ ಪರಿಶುದ್ಧ ಮಾಡಿದ ದಿನದಲ್ಲಿ ವಸ್ತುಗಳನ್ನೂ ಬಲಿಪೀಠವನ್ನೂ ಅದರ ಎಲ್ಲಾ ವಸ್ತು ಗಳನ್ನೂ ಅಭಿಷೇಕಿಸಿ ಪರಿಶುದ್ಧಮಾಡಿದ ಮೇಲೆ ಆದದ್ದೇನಂದರೆ--

2ಇಸ್ರಾಯೇಲ್ಯರ ಪ್ರಧಾನರೂ ತಮ್ಮ ತಂದೆಗಳ ಮನೆಯ ಮುಖ್ಯಸ್ಥರೂ ಗೋತ್ರಗಳ ಮುಖ್ಯಾಧಿಕಾರಿಗಳೂ ಎಣಿಸಲ್ಪಟ್ಟವರ ಮೇಲೆ ಇದ್ದ ವರು ಅರ್ಪಿಸಿದರು.

3ಅವರು ಕರ್ತನ ಎದುರಿನಲ್ಲಿ ತಂದ ಅರ್ಪಣೆ ಏನಂದರೆ--ಆರು ಕಮಾನು ಬಂಡಿ ಗಳೂ ಹನ್ನೆರಡು ಎತ್ತುಗಳೂ ಪ್ರಧಾನರಲ್ಲಿ ಇಬ್ಬರಿಗೆ ಒಂದು ಬಂಡಿಯನ್ನೂ, ಒಬ್ಬೊಬ್ಬನಿಗೆ ಒಂದೊಂದು ಎತ್ತನ್ನೂ ಅವರು ಗುಡಾರದ ಮುಂದೆ ತಂದರು.

4ಕರ್ತನು ಮಾತನಾಡಿ ಮೋಶೆಗೆ ಹೇಳಿದ್ದೇನಂದರೆ

5ಅವುಗಳನ್ನು ಅವರಿಂದ ತೆಗೆದುಕೋ, ಅವು ಸಭೆಯ ಗುಡಾರದ ಸೇವೆಮಾಡುವದಕ್ಕೋಸ್ಕರ ಇರಬೇಕು.ಅವುಗಳನ್ನು ಲೇವಿಯರಿಗೆ ಅವನವನ ಸೇವೆಯ ಪ್ರಕಾರ ಕೊಡಬೇಕು ಅಂದನು.

ಅರಣ್ಯಕಾಂಡ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी