ಅರಣ್ಯಕಾಂಡ 6:15

ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿ ಯಿಲ್ಲದ ರೊಟ್ಟಿಗಳ ಒಂದು ಪುಟ್ಟಿಯನ್ನೂ ಎಣ್ಣೇ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ ಅವುಗಳ ಆಹಾರದ ಅರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ತರಬೇಕು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 6

13ಇದು ನಾಜೀರನ ನಿಯಮವು: ಪ್ರತ್ಯೇಕಿಸಲ್ಪಟ್ಟ ಅವನ ದಿವಸಗಳು ಪೂರ್ಣವಾದ ಮೇಲೆ ಅವನನ್ನು ಸಭೆಯ ಗುಡಾರದ ಬಾಗಲಿನ ಬಳಿಗೆ ತರಬೇಕು.

14ಅವನು ಕರ್ತನಿಗೆ ತನ್ನ ಅರ್ಪಣೆಯನ್ನು ಅರ್ಪಿಸ ಬೇಕು; ಅದೇನಂದರೆ, ದಹನ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಟಗರಿನ ಮರಿಯನ್ನೂ ಪಾಪದ ಬಲಿಗಾಗಿ ಒಂದು ವರುಷದ ದೋಷವಿಲ್ಲದ ಒಂದು ಕುರಿಮರಿಯನ್ನೂ ಸಮಾಧಾನದ ಬಲಿಗಾಗಿ ದೋಷವಿಲ್ಲದ ಒಂದು ಟಗರನ್ನೂ ತರಬೇಕು.

15ಎಣ್ಣೇ ಬೆರೆಸಿದ ನಯವಾದ ಹಿಟ್ಟಿನಿಂದ ಮಾಡಿದ ಹುಳಿ ಯಿಲ್ಲದ ರೊಟ್ಟಿಗಳ ಒಂದು ಪುಟ್ಟಿಯನ್ನೂ ಎಣ್ಣೇ ಹಚ್ಚಿದ ಹುಳಿಯಿಲ್ಲದ ರೊಟ್ಟಿಯ ದೋಸೆಗಳನ್ನೂ ಅವುಗಳ ಆಹಾರದ ಅರ್ಪಣೆಯನ್ನೂ ಅವುಗಳ ಪಾನಾರ್ಪಣೆಗಳನ್ನೂ ತರಬೇಕು.

16ಇವುಗಳನ್ನು ಯಾಜಕನು ಕರ್ತನ ಎದುರಿನಲ್ಲಿ ತಂದು ಅವನ ಪಾಪದ ಬಲಿಯನ್ನೂ ದಹನಬಲಿಯನ್ನೂ ಅರ್ಪಿಸ ಬೇಕು.

17ಆ ಟಗರನ್ನು ಹುಳಿಯಿಲ್ಲದ ರೊಟ್ಟಿಯ ಪುಟ್ಟಿಯ ಸಂಗಡ ಕರ್ತನಿಗೆ ಸಮಾಧಾನದ ಅರ್ಪಣೆ ಗಳ ಬಲಿಗಾಗಿ ಅರ್ಪಿಸಬೇಕು; ಇದಲ್ಲದೆ ಯಾಜಕನು ಅವನ ಆಹಾರದ ಅರ್ಪಣೆಯನ್ನೂ ಪಾನಾರ್ಪಣೆ ಯನ್ನೂ ಅರ್ಪಿಸಬೇಕು.

ಅರಣ್ಯಕಾಂಡ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी