ಎಸ್ತೇರಳು 7:9

ಆಗ ಮನೆ ವಾರ್ತೆಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ--ಇಗೋ, ಅರಸ ನನ್ನು ಕುರಿತು ಒಳ್ಳೇದನ್ನು ಹೇಳಿದ ಮೊರ್ದೆಕೈಗೋಸ್ಕರ ಹಾಮಾನನು ಮಾಡಿಸಿದ ಐವತ್ತು ಮೊಳ ಉದ್ದವಾದ ಗಲ್ಲಿನ ಮರವು ಹಾಮಾನನ ಮನೆಯಲ್ಲಿ ಅದೆ ಅಂದನು. ಅದಕ್ಕೆ ಅರಸನು--ಅವನನ್ನು ಅದರಲ್ಲಿ ತೂಗು ಹಾಕಿರಿ ಅಂದನು.

ಸಂದರ್ಭದೊಂದಿಗೆ ಓದಿ · ಎಸ್ತೇರಳು 7

7ಅರಸನು ಕೋಪವುಳ್ಳವನಾಗಿ ದ್ರಾಕ್ಷಾ ರಸದ ಔತಣದಿಂದ ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇ ರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು, ಯಾಕಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ತಿಳಿದನು.

8ಅರಸನು ಅರ ಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ತಿರಿಗಿ ಬಂದಾಗ ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು--ನನ್ನ ಮುಂದೆ ಅವನು ರಾಣಿಯನ್ನು ಬಲಾತ್ಕಾರ ಮಾಡು ವನೋ ಅಂದನು. ಆ ಮಾತು ಅರಸನ ಬಾಯಿಂದ ಹೊರಟಾಗ ಸೇವಕರು ಹಾಮಾನನ ಮುಖವನ್ನು ಮುಚ್ಚಿದರು.

9ಆಗ ಮನೆ ವಾರ್ತೆಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ--ಇಗೋ, ಅರಸ ನನ್ನು ಕುರಿತು ಒಳ್ಳೇದನ್ನು ಹೇಳಿದ ಮೊರ್ದೆಕೈಗೋಸ್ಕರ ಹಾಮಾನನು ಮಾಡಿಸಿದ ಐವತ್ತು ಮೊಳ ಉದ್ದವಾದ ಗಲ್ಲಿನ ಮರವು ಹಾಮಾನನ ಮನೆಯಲ್ಲಿ ಅದೆ ಅಂದನು. ಅದಕ್ಕೆ ಅರಸನು--ಅವನನ್ನು ಅದರಲ್ಲಿ ತೂಗು ಹಾಕಿರಿ ಅಂದನು.

10ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.

ಎಸ್ತೇರಳು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी