೨ ಪೂರ್ವಕಾಲವೃತ್ತಾಂತ 34:19

ಅರಸನು ನ್ಯಾಯಪ್ರಮಾಣದ ವಾಕ್ಯಗಳನ್ನು ಕೇಳಿ ದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 34

17ಇದಲ್ಲದೆ ಅವರು ಕರ್ತನ ಆಲಯದಲ್ಲಿ ಸಿಕ್ಕಿದ ಹಣವನ್ನು ಸುರಿದು ವಿಚಾರಕರ ಕೈಯಲ್ಲಿಯೂ ಕೆಲಸದವರ ಕೈಯ ಲ್ಲಿಯೂ ಒಪ್ಪಿಸಿದ್ದಾರೆ.

18ರಾಯಸದವನಾದ ಶಾಫಾ ನನು ಅರಸನಿಗೆ--ಯಾಜಕನಾದ ಹಿಲ್ಕೀಯನು ನನಗೆ ಪುಸ್ತಕವನ್ನು ಕೊಟ್ಟಿದ್ದಾನೆ ಎಂದು ತಿಳಿಸಿದನು; ಆಗ ಶಾಫಾನನು ಅದನ್ನು ಅರಸನ ಮುಂದೆ ಓದಿದನು.

19ಅರಸನು ನ್ಯಾಯಪ್ರಮಾಣದ ವಾಕ್ಯಗಳನ್ನು ಕೇಳಿ ದಾಗ ತನ್ನ ವಸ್ತ್ರಗಳನ್ನು ಹರಿದುಕೊಂಡನು.

20ಅರಸನು ಹಿಲ್ಕೀಯನಿಗೂ ಶಾಫಾನನ ಮಗನಾದ ಅಹೀಕಾಮ ನಿಗೂ ವಿಾಕನ ಮಗನಾದ ಅಬ್ದೋನನಿಗೂ ರಾಯಸದ ವನಾದ ಶಾಫಾನನಿಗೂ ಅರಸನ ಸೇವಕನಾದ ಅಸಾಯ ನಿಗೂ ಆಜ್ಞಾಪಿಸಿ--

21ನೀವು ಹೋಗಿ ನನಗೋಸ್ಕ ರವೂ ಇಸ್ರಾಯೇಲಿನಲ್ಲಿಯೂ ಯೆಹೂದದಲ್ಲಿಯೂ ಉಳಿದವರಿಗೋಸ್ಕರವೂ ಸಿಕ್ಕಿದ ಪುಸ್ತಕದ ಮಾತು ಗಳನ್ನು ಕುರಿತು ಕರ್ತನನ್ನು ವಿಚಾರಿಸಿರಿ. ಯಾಕಂದರೆ ನಮ್ಮ ಪಿತೃಗಳು ಈ ಪುಸ್ತಕದಲ್ಲಿ ಬರೆದ ಎಲ್ಲಾದರ ಪ್ರಕಾರ ಮಾಡಲು ಕರ್ತನ ವಾಕ್ಯವನ್ನು ಕೈಕೊಳ್ಳದೆ ಇದ್ದದರಿಂದ ನಮ್ಮ ಮೇಲೆ ಸುರಿದ ಕರ್ತನ ಕೋಪವು ದೊಡ್ಡದಾಗಿದೆ ಎಂದು ಹೇಳಿದನು.

೨ ಪೂರ್ವಕಾಲವೃತ್ತಾಂತ 34 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी