ಈ ದಿನದ ವರೆಗೂ ಮಾಡಿದ ಹಾಗೆಯೇ ನಿಮ್ಮ ದೇವರಾದ ಕರ್ತನನ್ನು ಅಂಟಿಕೊಂಡಿರ್ರಿ.
6ಈಗ ನೀವು ಮೋಶೆಯ ನ್ಯಾಯಪ್ರಮಾಣದ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನು ಕೈಕೊಂಡು ಬಹು ಧೈರ್ಯದಿಂದ ಮಾಡುವ ಹಾಗೆ ಅದನ್ನು ಬಿಟ್ಟು ಬಲಗಡೆಗಾದರೂ ಎಡಗಡೆಗಾದರೂ ತಿರುಗದೆ
7ನಿಮ್ಮ ಮಧ್ಯದಲ್ಲಿ ಉಳಿದಿರುವ ಈ ಜನಾಂಗಗಳಲ್ಲಿ ಸೇರದೆ ಅವರ ದೇವರುಗಳ ಹೆಸರುಗಳನ್ನು ಸ್ಮರಿಸದೆ ಅವುಗಳ ಮೇಲೆ ಆಣೆ ಇಡದೆ ನೀವು ಅವುಗಳಿಗೆ ಸೇವೆಮಾಡದೆ ಅಡ್ಡಬೀಳದೆ ಇರುವ ಹಾಗೆ ಬಲ ಗೊಂಡು
8ಈ ದಿನದ ವರೆಗೂ ಮಾಡಿದ ಹಾಗೆಯೇ ನಿಮ್ಮ ದೇವರಾದ ಕರ್ತನನ್ನು ಅಂಟಿಕೊಂಡಿರ್ರಿ.
9ಕರ್ತನು ನಿಮ್ಮ ಮುಂದೆ ಬಲವಾದ ದೊಡ್ಡ ಜನಾಂಗಗಳನ್ನು ಹೊರಡಿಸಿಬಿಟ್ಟನು. ಆದರೆ ನಿಮ್ಮ ಮುಂದೆ ಈ ವರೆಗೂ ಒಬ್ಬರಾದರೂ ನಿಲ್ಲಲಾರದೆ ಹೋದರು.
10ನಿಮ್ಮಲ್ಲಿ ಇರುವ ಒಬ್ಬನು ಸಾವಿರ ಮಂದಿಯನ್ನು ಹಿಂದಟ್ಟುವನು. ನಿಮ್ಮ ದೇವರಾದ ಕರ್ತನು ನಿಮಗೆ ವಾಗ್ದಾನಮಾಡಿದ ಹಾಗೆ ಆತನೇ ನಿಮಗೋಸ್ಕರ ಯುದ್ಧಮಾಡುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ