ಯೆರೆಮಿಯ 50:8

ಬಾಬೆಲಿನೊಳ ಗಿಂದ ಓಡಿಹೋಗಿರಿ; ಕಸ್ದೀಯರ ದೇಶದಿಂದ ಹೊರ ಡಿರಿ, ಮಂದೆಯ ಮುಂದೆ ಹೋತಗಳ ಹಾಗೆ ಇರ್ರಿ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 50

6ನನ್ನ ಜನರು ಕಳೆದುಹೋದ ಕುರಿಗಳಾಗಿದ್ದರು; ಅವರ ಕುರುಬರು ಅವರನ್ನು ತಪ್ಪಿ ಹೋಗುವಂತೆ ಮಾಡಿದರು; ಅವರನ್ನು ಬೆಟ್ಟಗಳ ಮೇಲೆ ತಿರುಗಿಸಿ ಅಡ್ಡಾಡಿಸಿದರು; ಅವರು ಬೆಟ್ಟದಿಂದ ಗುಡ್ಡಕ್ಕೆ ಹೋದರು; ಮಲಗುವ ಸ್ಥಳವನ್ನು ಮರೆತುಬಿಟ್ಟರು.

7ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟರು, ಅವರ ಎದುರಾಳಿಗಳು--ನಮ್ಮಲ್ಲಿ ಅಪರಾಧವಿಲ್ಲ; ನೀತಿಯ ನಿವಾಸವಾದ ಕರ್ತನಿಗೆ, ಅವರ ತಂದೆಗಳ ನಿರೀಕ್ಷಣೆಯಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿದ್ದಾರೆಂದು ಅಂದರು.

8ಬಾಬೆಲಿನೊಳ ಗಿಂದ ಓಡಿಹೋಗಿರಿ; ಕಸ್ದೀಯರ ದೇಶದಿಂದ ಹೊರ ಡಿರಿ, ಮಂದೆಯ ಮುಂದೆ ಹೋತಗಳ ಹಾಗೆ ಇರ್ರಿ.

9ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ; ಬಾಬೆಲಿಗೆ ವಿರೋಧವಾಗಿ ಏಳುವಂತೆ ಮಾಡುತ್ತೇನೆ. ಅವರು ಅದಕ್ಕೆ ವಿರೋಧ ವಾಗಿ ಯುದ್ಧವನ್ನು ಸಿದ್ಧಮಾಡುವರು; ಅಲ್ಲಿಂದ ಅದು ಹಿಡಿಯಲ್ಪಡುವದು; ಅವರ ಬಾಣಗಳು ಬಲಿಷ್ಠನಾದ ಪ್ರವೀಣಶಾಲಿಯ ಹಾಗಿರುವವು. ಯಾವದೂ ವ್ಯರ್ಥವಾಗಿ ತಿರುಗವು.

10ಕಸ್ದೀಯರ ದೇಶವು ಸುಲಿಗೆಯಾಗುವದು; ಅದನ್ನು ಸುಲುಕೊಳ್ಳುವವರೆಲ್ಲರಿಗೆ ತೃಪ್ತಿಯಾಗುವದೆಂದು ಕರ್ತನು ಅನ್ನುತ್ತಾನೆ.

ಯೆರೆಮಿಯ 50 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी