ಪ್ರಕಟನೆ 19:11

ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;

ಸಂದರ್ಭದೊಂದಿಗೆ ಓದಿ · ಪ್ರಕಟನೆ 19

9ಇದಲ್ಲದೆ ಅವನು--ಕುರಿಮರಿ ಯಾದಾತನ ವಿವಾಹದ ಔತಣಕ್ಕೆ ಕರೆಯಲ್ಪಟ್ಟವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿದನು. ಇದಲ್ಲದೆ ಅವನು--ಇವುಗಳು ದೇವರ ನಿಜವಾದ ಮಾತುಗಳಾಗಿವೆ ಎಂದು ನನಗೆ ಹೇಳಿದನು.

10ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮುಂದೆ ಬೀಳಲು ಅವನು--ನೀನು ಹಾಗೆ ಮಾಡಬೇಡ ನೋಡು, ನಾನು ನಿನಗೂ ಯೇಸುವಿನ ವಿಷಯವಾದ ಸಾಕ್ಷಿಯನ್ನು ಹೊಂದಿದ ನಿನ್ನ ಸಹೋದರ ರಿಗೂ ಜೊತೆಯ ದಾಸನಾಗಿದ್ದೇನೆ; ದೇವರಿಗೆ ಆರಾಧನೆ ಮಾಡು. ಯಾಕಂದರೆ ಯೇಸುವಿನ ವಿಷಯ

11ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಬಿಳೀ ಕುದುರೆಯು ಕಾಣಿಸಿತು; ಅದರ ಮೇಲೆ ಕೂತಿದ್ದಾತನು ನಂಬಿಗಸ್ತನೂ ಸತ್ಯವಂತನೂ ಎಂದು ಕರೆಯಲ್ಪಟ್ಟನು. ಆತನು ನೀತಿಯಿಂದ ನ್ಯಾಯವಿಚಾರಣೆ ಮಾಡಿ ಯುದ್ಧ ಮಾಡುತ್ತಾನೆ;

12ಆತನ ಕಣ್ಣುಗಳು ಬೆಂಕಿಯ ಉರಿಯಂತಿದ್ದವು; ಆತನ ತಲೆಯ ಮೇಲೆ ಅನೇಕ ಕಿರೀಟಗಳು ಇದ್ದವು. ಬರೆಯಲ್ಪಟ್ಟ ಹೆಸರು ಆತನಿಗೆ ಇತ್ತು. ಅದು ಆತನಿಗೇ ಹೊರತು ಮತ್ತಾರಿಗೂ ತಿಳಿದಿರಲಿಲ್ಲ.

13ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿ ಕೊಂಡಿದ್ದನು. ಆತನ ಹೆಸರು ದೇವರವಾಕ್ಯ ವೆಂದು ಕರೆಯಲ್ಪಡುತ್ತದೆ.

ಪ್ರಕಟನೆ 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी