ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
18ನಿಮ್ಮ ತಂದೆ ಗಳಿಂದ ಕಲಿತುಕೊಂಡ ಸಂಪ್ರದಾಯದ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ನಶಿಸಿ ಹೋಗುವ ಬೆಳ್ಳಿ ಬಂಗಾರದಿಂದಲ್ಲ;
19ಆದರೆ ಪೂರ್ಣಾಂಗವಾದ ನಿಷ್ಕಳಂಕ ಕುರಿಮರಿಯ ರಕ್ತ ದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.
20ಆತನು ಜಗದುತ್ಪತ್ತಿಗೆ ಮೊದಲೇ ನೇಮಿಸಲ್ಪಟ್ಟು ಈ ಅಂತ್ಯ ಕಾಲಗಳಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.
21ಹೀಗಿರ ಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿರುವಂತೆ ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಪ್ರಭಾವವನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ವಿಶ್ವಾಸವಿಟ್ಟವರಾದಿರಷ್ಟೆ.
22ನೀವು ಆತ್ಮನ ಮೂಲಕ ಸತ್ಯಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಮಾಡಿಕೊಂಡದ್ದರಿಂದ ನಿಷ್ಕಪಟ ವಾದ ಸಹೋದರ ಸ್ನೇಹವುಳ್ಳವರಾಗಿರತಕ್ಕದ್ದು. ಹೀಗಿರ ಲಾಗಿ ಒಬ್ಬರನ್ನೊಬ್ಬರು ಶುದ್ಧವಾದ ಹೃದಯದಿಂದಲೂ ಆಸಕ್ತಿಯಿಂದಲೂ ಪ್ರೀತಿಸಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ