ಯೆಶಾಯ 5:5

ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.

ಸಂದರ್ಭದೊಂದಿಗೆ ಓದಿ · ಯೆಶಾಯ 5

3ಓ ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನನಗೂ ನನ್ನ ದ್ರಾಕ್ಷೆಯ ತೋಟಕ್ಕೂ ನ್ಯಾಯತೀರಿಸಿರಿ ಎಂದು ನಿಮ್ಮನ್ನು ಪ್ರಾರ್ಥಿಸುತ್ತೇನೆ.

4ನನ್ನ ದ್ರಾಕ್ಷೇ ತೋಟದಲ್ಲಿ ನಾನು ಮಾಡಿದ್ದಕ್ಕಿಂತ ಇನ್ನೂ ಹೆಚ್ಚಾಗಿ ಅದಕ್ಕೆ ಏನು ಮಾಡಬೇಕಾಗಿತ್ತು? ಹೀಗಿರಲು ಅದು ಒಳ್ಳೇ ದ್ರಾಕ್ಷೇ ಫಲವನ್ನು ಫಲಿಸುವದೆಂದು ನಾನು ನಿರೀಕ್ಷಿಸುತ್ತಿರಲು ಅದು ಕಾಡುಹಣ್ಣನ್ನು ಕೊಟ್ಟಿದ್ದು ಯಾಕೆ?

5ನನ್ನ ದ್ರಾಕ್ಷೇ ತೋಟಕ್ಕೆ ನಾನು ಮಾಡುವದು ಏನೆಂದು ನಾನು ನಿಮಗೆ ತಿಳಿಸುತ್ತೇನೆ. ನಾನು ಅದರ ಬೇಲಿ ಯನ್ನು ತೆಗೆದುಹಾಕುವೆನು. ಆಗ ಅದು ಮೇಯಲ್ಪಡು ವದು. ಅದರ ಗೋಡೆಯನ್ನು ಕೆಡವಿಬಿಡುವೆನು, ಆಗ ಅದು ತುಳಿದಾಟಕ್ಕೆ ಈಡಾಗುವದು.

6ಅದನ್ನು ನಾನು ಹಾಳಾಗಲು ಬಿಡುವೆನು: ಅದನ್ನು ಯಾರೂ ಕುಡಿ ಕತ್ತರಿಸುವದಿಲ್ಲ; ಅಗೆಯುವದೂ ಇಲ್ಲ. ಆದರೆ ಅಲ್ಲಿ ಮುಳ್ಳುಪೊದೆಗಳು ಬೆಳೆಯುವವು; ಅಲ್ಲದೆ ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಆಜ್ಞಾ ಪಿಸುವೆನು.

7ಸೈನ್ಯಗಳ ಕರ್ತನ ದ್ರಾಕ್ಷೇ ತೋಟವು ಇಸ್ರಾಯೇಲಿನ ಮನೆಯೇ, ಯೆಹೂದದ ಜನವೋ, ಆತನ ಇಷ್ಟದ ಗಿಡವೇ. ಆತನು ನ್ಯಾಯವನ್ನು ನಿರೀ ಕ್ಷಿಸಲು, ಇಗೋ, ಹಿಂಸೆಯೇ; ನೀತಿಯನ್ನು ನಿರೀಕ್ಷಿಸಲು ಗೋಳಾಟವೇ ಸಿಕ್ಕೀತು.

ಯೆಶಾಯ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी