ಮತ್ತಾಯನು 13:20

ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;

ಸಂದರ್ಭದೊಂದಿಗೆ ಓದಿ · ಮತ್ತಾಯನು 13

18ಆದದರಿಂದ ಬಿತ್ತುವವನ ಸಾಮ್ಯದ ವಿಷಯವಾಗಿ ನೀವು ಕೇಳಿರಿ:

19ಯಾವನಾದರೂ ರಾಜ್ಯದ ವಾಕ್ಯವನ್ನು ಕೇಳಿ ಗ್ರಹಿಸದೆ ಇರುವಾಗ ಕೆಡುಕನು ಬಂದು ಅವನ ಹೃದಯದಲ್ಲಿ ಬಿತ್ತಿದ್ದನ್ನು ತೆಗೆದು ಬಿಡು ವನು; ದಾರಿಯ ಮಗ್ಗುಲಲ್ಲಿ ಬೀಜವನ್ನು ಅಂಗೀಕರಿ ಸಿದವನು ಇವನೇ.

20ಮತ್ತು ಬಂಡೆಯ ಸ್ಥಳಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಇವನೇ; ಇವನು ವಾಕ್ಯವನ್ನು ಕೇಳಿದ ಕೂಡಲೆ ಸಂತೋಷದಿಂದ ಅದನ್ನು ಅಂಗೀಕರಿಸುತ್ತಾನೆ;

21ಆದರೂ ಅವನಲ್ಲಿ ಬೇರಿಲ್ಲದ ಕಾರಣ ಸ್ವಲ್ಪಕಾಲ ಮಾತ್ರ ಇರುವನು; ಯಾಕಂದರೆ ವಾಕ್ಯಕ್ಕಾಗಿ ಸಂಕಟ ಇಲ್ಲವೆ ಹಿಂಸೆ ಬಂದಾಗ ತಕ್ಷಣವೇ ಅವನು ಅಭ್ಯಂತರ ಪಡುವನು.

22ಮುಳ್ಳುಗಳಲ್ಲಿ ಬೀಜವನ್ನು ಅಂಗೀಕರಿಸಿದವನು ಸಹ ಇವನೇ; ಇವನು ವಾಕ್ಯವನ್ನು ಕೇಳುತ್ತಾನೆ; ಆದರೆ ಈ ಪ್ರಪಂಚದ ಚಿಂತೆಯೂ ಐಶ್ವರ್ಯದ ಮೋಸವೂ ವಾಕ್ಯವನ್ನು ಅಡಗಿಸುವ ದರಿಂದ ಅವನು ಫಲ ಕೊಡಲಾರನು.

ಮತ್ತಾಯನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी