ವಿಮೋಚನಕಾಂಡ 33:18

ಅವನು--ನಿನ್ನ ಮಹಿಮೆಯನ್ನು ನನಗೆ ತೋರಿಸು ಎಂದು ನಾನು ನಿನ್ನನ್ನು ಬೇಡುತ್ತೇನೆ ಅಂದನು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 33

16ನನಗೂ ನಿನ್ನ ಜನರಿಗೂ ನಿನ್ನ ದೃಷ್ಟಿಯಲ್ಲಿ ಕೃಪೆ ದೊರಕಿತೆಂದು ಯಾವದರಿಂದ ತಿಳಿದು ಬರುವದು? ನೀನು ನಮ್ಮೊಂದಿಗೆ ಹೋಗುವ ದರಿಂದ ಅಲ್ಲವೋ? ಹೀಗೆ ನಾನೂ ನಿನ್ನ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕ ವಾಗುವೆವು ಅಂದನು.

17ಅದಕ್ಕೆ ಕರ್ತನು ಮೋಶೆಗೆ--ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರಕಿತು. ನಾನು ನಿನ್ನನ್ನು ಹೆಸರಿನಿಂದ ತಿಳಿದಿದ್ದೇನೆ ಅಂದನು.

18ಅವನು--ನಿನ್ನ ಮಹಿಮೆಯನ್ನು ನನಗೆ ತೋರಿಸು ಎಂದು ನಾನು ನಿನ್ನನ್ನು ಬೇಡುತ್ತೇನೆ ಅಂದನು.

19ಅದಕ್ಕೆ ಆತನು--ನಾನು ನನ್ನ ಸರ್ವೋತ್ತಮತ್ವವನ್ನು ನಿನ್ನೆದುರಿಗೆ ಹಾದು ಹೋಗಗೊಡಿಸಿ ಕರ್ತನ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ ನಾನು ಯಾರಿಗೆ ಕೃಪೆಯುಳ್ಳವ ನಾಗಿರಬೇಕೋ ಅವರಿಗೆ ಕೃಪೆಯುಳ್ಳವನಾಗಿರುವೆನು; ನಾನು ಯಾರಿಗೆ ಕರುಣೆಯನ್ನು ತೋರಿಸಬೇಕೋ ಅವರಿಗೆ ಕರುಣೆಯನ್ನು ತೋರಿಸುವೆನು ಅಂದನು.

20ಆತನು ಅವನಿಗೆ--ನೀನು ನನ್ನ ಮುಖವನ್ನು ನೋಡ ಲಾರಿ; ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕುವದಿಲ್ಲ ಅಂದನು.

ವಿಮೋಚನಕಾಂಡ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी