ಯೆಶಾಯ 40:8

ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತು.

ಸಂದರ್ಭದೊಂದಿಗೆ ಓದಿ · ಯೆಶಾಯ 40

6ವಾಣಿಯು ಕೂಗು ಅನ್ನುತ್ತದೆ. ಅವನು--ನಾನು ಏನು ಕೂಗಲಿ ಅನ್ನಲು ಎಲ್ಲಾ ನರಮನುಷ್ಯರು ಹುಲ್ಲಿನ ಹಾಗಿದ್ದಾರೆ. ಕರ್ತನ ಶ್ವಾಸವು ಅವರ ಮೇಲೆ ಬೀಸುವದರಿಂದ ಅವರ ಲಾವಣ್ಯವೆಲ್ಲಾ ಹೊಲದ ಹೂವಿನಂತಿದೆ.

7ಹುಲ್ಲು ಒಣಗಿ ಹೋಗು ವದು ಹೂವು ಬಾಡಿಹೋಗುವದು. ಕರ್ತನ ಆತ್ಮ ಅವುಗಳ ಮೇಲೆ ಊದುವನು; ನಿಶ್ಚಯವಾಗಿ ಜನರು ಹುಲ್ಲೇ.

8ಹುಲ್ಲು ಒಣಗಿಹೋಗುವದು ಹೂವು ಬಾಡಿಹೋಗುವದು. ಆದರೆ ನಮ್ಮ ದೇವರ ವಾಕ್ಯವು ಸದಾಕಾಲ ನಿಲ್ಲುವದು ಎಂದು ಉತ್ತರವಾಯಿತು.

9ಶುಭಸಮಾಚಾರವನ್ನು ತಿಳಿಸುವ ಓ ಚೀಯೋನೇ, ನೀನು ಉನ್ನತಪರ್ವತವನ್ನು ಏರು; ಶುಭಸಮಾ ಚಾರವನ್ನು ತಿಳಿಸುವ ಓ ಯೆರೂಸಲೇಮೇ, ಬಲವಾಗಿ ನಿನ್ನ ಸ್ವರವನ್ನು ಎತ್ತು, ಭಯಪಡದೆ ಎತ್ತು; ಯೆಹೂದದ ಪಟ್ಟಣಗಳಿಗೆ ಇಗೋ, ನಿನ್ನ ದೇವರು ಎಂದು ಹೇಳು.

10ಇಗೋ, ಕರ್ತನಾದ ದೇವರು ಬಲವುಳ್ಳ ಕೈಯಿಂದ ಬರುತ್ತಾನೆ, ಆತನ ತೋಳು ತನಗೋಸ್ಕರ ಆಳುವದು. ಇಗೋ, ಆತನ ಬಹುಮಾನವು ಆತನ ಸಂಗಡಲೂ ಆತನ ಪ್ರತಿಫಲವು ಆತನ ಮುಂದೆಯೂ ಇದೆ.

ಯೆಶಾಯ 40 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी