ಯೆಹೆಜ್ಕೇಲನು 30:6

ಕರ್ತನು ಹೀಗೆ ಹೇಳುತ್ತಾನೆ--ಐಗುಪ್ತಕ್ಕೆ ಆಧಾರ ವಾದವರು ಬೀಳುವರು. ಅದರ ಶಕ್ತಿಯ ಮದವು ಇಳಿದು ಹೋಗುವದು. ಅಲ್ಲಿನ ಜನರು ಮಿಗ್ದೋಲಿ ನಿಂದ ಸೆವೇನೆಯ ಗೋಪುರ ಮೊದಲುಗೊಂಡು ಅವರಲ್ಲಿ ಕತ್ತಿಯಿಂದ ಹತರಾಗುವರು ಎಂದು ದೇವ ರಾದ ಕರ್ತನು ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 30

4ಕತ್ತಿಯು ಐಗುಪ್ತದ ಮೇಲೆ ಬರುವದು, ಅಲ್ಲಿನ ಪ್ರಜೆಗಳು ಹತರಾಗಲು ಐಥಿಯೋಪ್ಯ ದಲ್ಲಿಯೂ ಸಂಕಟವಾಗುವದು; ಐಗುಪ್ತದ ಜನಸಮೂ ಹವು ಒಯ್ಯಲ್ಪಡುವದು ಅದರ ಅಸ್ತಿವಾರವು ಮುರಿದು ಹಾಳಾಗುವದು.

5ಐಥಿಯೋಪ್ಯ, ಲಿಬಿಯ ಮತ್ತು ಲಿಡಿಯ ಎಲ್ಲಾ ಮಿಶ್ರಜನರೂ ಕೂಬ್ಯರೂ ಮಿತ್ರರಾಜ್ಯ ದವರೂ ಅವರ ಸಂಗಡ ಕತ್ತಿಯಿಂದ ಹತರಾಗುವರು.

6ಕರ್ತನು ಹೀಗೆ ಹೇಳುತ್ತಾನೆ--ಐಗುಪ್ತಕ್ಕೆ ಆಧಾರ ವಾದವರು ಬೀಳುವರು. ಅದರ ಶಕ್ತಿಯ ಮದವು ಇಳಿದು ಹೋಗುವದು. ಅಲ್ಲಿನ ಜನರು ಮಿಗ್ದೋಲಿ ನಿಂದ ಸೆವೇನೆಯ ಗೋಪುರ ಮೊದಲುಗೊಂಡು ಅವರಲ್ಲಿ ಕತ್ತಿಯಿಂದ ಹತರಾಗುವರು ಎಂದು ದೇವ ರಾದ ಕರ್ತನು ಹೇಳುತ್ತಾನೆ.

7ಆಗ ಅವರು ಹಾಳಾಗಿರುವ ದೇಶಗಳೊಳಗೆ ಹಾಳಾಗುವರು. ಅದರ ಪಟ್ಟಣ ಗಳು ಹಾಳಾದ ಪಟ್ಟಗಳ ಮಧ್ಯದಲ್ಲಿ ಇರುವವು.

8ನಾನು ಐಗುಪ್ತದಲ್ಲಿ ಬೆಂಕಿಯಿಟ್ಟಾಗ ಅದಕ್ಕೆ ಸಹಾಯ ಮಾಡುವವರೆಲ್ಲರೂ ನಾಶವಾದ ಮೇಲೆ ಅವರಿಗೆ ನಾನೇ ಕರ್ತನೆಂದು ತಿಳಿಯುವದು.

ಯೆಹೆಜ್ಕೇಲನು 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी