ಅಪೊಸ್ತಲರ ಕೃತ್ಯಗಳು 7:23

ಅವನಿಗೆ ನಾಲ್ವತ್ತು ವರುಷ ವಯಸ್ಸು ತುಂಬಿದಾಗ ಹೋಗಿ ತನ್ನ ಸಹೋದರರಾದ ಇಸ್ರಾ ಯೇಲ್ಯರನ್ನು ನೋಡಬೇಕೆಂಬ ಆಶೆಯು ಅವನ ಹೃದ ಯದಲ್ಲಿ ಹುಟ್ಟಿತು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 7

21ಆಮೇಲೆ ಅವನನ್ನು ಹೊರಗೆ ಹಾಕಿ ದಾಗ ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು.

22ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು.

23ಅವನಿಗೆ ನಾಲ್ವತ್ತು ವರುಷ ವಯಸ್ಸು ತುಂಬಿದಾಗ ಹೋಗಿ ತನ್ನ ಸಹೋದರರಾದ ಇಸ್ರಾ ಯೇಲ್ಯರನ್ನು ನೋಡಬೇಕೆಂಬ ಆಶೆಯು ಅವನ ಹೃದ ಯದಲ್ಲಿ ಹುಟ್ಟಿತು.

24ಅವರಲ್ಲಿ ಒಬ್ಬನಿಗೆ ಅನ್ಯಾಯ ವಾಗುವದನ್ನು ಅವನು ನೋಡಿ ಅವನಿಗೆ ಆಶ್ರಯ ಕೊಟ್ಟು ಐಗುಪ್ತ್ಯನನ್ನು ಹೊಡೆದು ಹಾಕಿ ಪೀಡಿಸಲ್ಪಡು ತ್ತಿದ್ದವನಿಗಾಗಿ ಮುಯ್ಯಿ ತೀರಿಸಿದನು.

25ಯಾಕಂದರೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಮಾಡುತ್ತಾ ನೆಂಬದು ತನ್ನ ಸಹೋದರರಿಗೆ ತಿಳಿದು ಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ.

ಅಪೊಸ್ತಲರ ಕೃತ್ಯಗಳು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी