೨ ಪೂರ್ವಕಾಲವೃತ್ತಾಂತ 33:3

ಏನಂದರೆ, ಅವನು ತನ್ನ ತಂದೆಯಾದ ಹಿಜ್ಕೀಯನು ಕೆಡವಿಹಾಕಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಎಬ್ಬಿಸಿ ತೋಪುಗಳನ್ನು ಹಾಕಿ ಆಕಾಶದ ಸೈನ್ಯ ಕ್ಕೆಲ್ಲಾ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 33

1ಮನಸ್ಸೆಯು ಆಳಲು ಆರಂಭಿಸಿದಾಗ ಹನ್ನೆರಡು ವರುಷದವನಾಗಿದ್ದು ಯೆರೂ ಸಲೇಮಿನಲ್ಲಿ ಐವತ್ತೈದು ವರುಷ ಆಳಿದನು.

2ಆದರೆ ಕರ್ತನು ಇಸ್ರಾಯೇಲಿನ ಮಕ್ಕಳ ಮುಂದೆ ಹೊರಡಿಸಿದ ಜನಾಂಗಗಳ ಅಸಹ್ಯಗಳ ಪ್ರಕಾರವೇ ಅವನು ಕರ್ತನ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಿದನು.

3ಏನಂದರೆ, ಅವನು ತನ್ನ ತಂದೆಯಾದ ಹಿಜ್ಕೀಯನು ಕೆಡವಿಹಾಕಿದ ಉನ್ನತ ಸ್ಥಳಗಳನ್ನು ತಿರಿಗಿ ಕಟ್ಟಿಸಿ ಬಾಳನಿಗೆ ಬಲಿಪೀಠ ಗಳನ್ನು ಎಬ್ಬಿಸಿ ತೋಪುಗಳನ್ನು ಹಾಕಿ ಆಕಾಶದ ಸೈನ್ಯ ಕ್ಕೆಲ್ಲಾ ಅಡ್ಡಬಿದ್ದು ಅವುಗಳನ್ನು ಸೇವಿಸಿದನು.

4ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.

5ಕರ್ತನ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು.

೨ ಪೂರ್ವಕಾಲವೃತ್ತಾಂತ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी