ಮಾರ್ಕನು 1:25

ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳ ಗಿಂದ ಹೊರಗೆ ಬಾ ಅಂದನು.

ಸಂದರ್ಭದೊಂದಿಗೆ ಓದಿ · ಮಾರ್ಕನು 1

23ಆಗ ಅವರ ಸಭಾಮಂದಿ ರದಲ್ಲಿ ಅಶುದ್ಧಾತ್ಮವಿದ್ದ ಒಬ್ಬ ಮನುಷ್ಯನಿದ್ದನು.

24ಅವನು--ನಮ್ಮನ್ನು ಬಿಟ್ಟುಬಿಡು; ನಜರೇತಿನ ಯೇಸುವೇ, ನಮ್ಮಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕಾಗಿ ನೀನು ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು; ನೀನು ದೇವರ ಪರಿಶುದ್ಧನೇ ಎಂದು ಕೂಗಿ ಹೇಳಿದನು.

25ಆಗ ಯೇಸು ಅವನನ್ನು ಗದರಿಸಿ--ಸುಮ್ಮನಿರು, ಅವನೊಳ ಗಿಂದ ಹೊರಗೆ ಬಾ ಅಂದನು.

26ಆಗ ಅಶುದ್ಧಾತ್ಮವು ಅವನನ್ನು ಒದ್ದಾಡಿಸಿದ ಮೇಲೆ ಮಹಾಶಬ್ದದಿಂದ ಕೂಗಿ ಅವನೊಳಗಿಂದ ಹೊರಗೆ ಬಂದಿತು.

27ಅದಕ್ಕೆ ಅವರೆಲ್ಲರೂ--ಇದು ಏನಾಗಿರಬಹುದು? ಈ ಹೊಸ ಬೋಧನೆ ಯಾವದು? ಯಾಕಂದರೆ ಆತನು ಅಶುದ್ಧಾತ್ಮಗಳಿಗೂ ಅಧಿಕಾರದಿಂದ ಅಪ್ಪಣೆಕೊಡು ತ್ತಾನೆ; ಅವು ಆತನಿಗೆ ವಿಧೇಯವಾಗುತ್ತವಲ್ಲಾ ಎಂದು ತಮ್ಮಲ್ಲಿ ತಾವೇ ಪ್ರಶ್ನಿಸಿಕೊಳ್ಳುವಷ್ಟು ವಿಸ್ಮಯಗೊಂಡರು.

ಮಾರ್ಕನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी