ಯಾಜಕಕಾಂಡ 10:12

ಮೋಶೆಯು ಆರೋನನೊಂದಿಗೂ ಉಳಿದ ಅವನ ಕುಮಾರರಾದ ಎಲ್ಲಾಜಾರನೊಂದಿಗೂ ಈತಾ ಮಾರನೊಂದಿಗೂ ಮಾತನಾಡಿ ಹೇಳಿದ್ದೇನಂದರೆಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳಲ್ಲಿ ಉಳಿದಿರುವ ಆಹಾರ ಸಮರ್ಪಣೆಯನ್ನು ತೆಗೆದು ಕೊಂಡು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿ ಯಿಲ್ಲದೆ ತಿನ್ನಿರಿ; ಅದು ಅತಿ ಪರಿಶುದ್ಧವಾದದ್ದು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 10

10ನೀವು ಶುದ್ಧವಾದದ್ದಕ್ಕೂ ಅಶುದ್ಧವಾದದ್ದಕ್ಕೂ ಪವಿತ್ರವಾದದ್ದಕ್ಕೂ ಅಪವಿತ್ರ ವಾದದ್ದಕ್ಕೂ ವ್ಯತ್ಯಾಸವನ್ನು ತೋರಿಸುವದಕ್ಕಾಗಿಯೂ

11ನೀವು ಇಸ್ರಾಯೇಲ್‌ ಮಕ್ಕಳಿಗೆ ಕರ್ತನು ಮೋಶೆಯ ಕೈಗೆ ಒಪ್ಪಿಸಿ ಹೇಳಿದ ಹಾಗೆ ಎಲ್ಲಾ ಕಟ್ಟಳೆಗಳನ್ನು ಬೋಧಿಸುವದಕ್ಕಾಗಿಯೂ ಇರುವದು.

12ಮೋಶೆಯು ಆರೋನನೊಂದಿಗೂ ಉಳಿದ ಅವನ ಕುಮಾರರಾದ ಎಲ್ಲಾಜಾರನೊಂದಿಗೂ ಈತಾ ಮಾರನೊಂದಿಗೂ ಮಾತನಾಡಿ ಹೇಳಿದ್ದೇನಂದರೆಕರ್ತನಿಗೆ ಬೆಂಕಿಯಿಂದ ಮಾಡಿದ ಸಮರ್ಪಣೆಗಳಲ್ಲಿ ಉಳಿದಿರುವ ಆಹಾರ ಸಮರ್ಪಣೆಯನ್ನು ತೆಗೆದು ಕೊಂಡು ಅದನ್ನು ಯಜ್ಞವೇದಿಯ ಬಳಿಯಲ್ಲಿ ಹುಳಿ ಯಿಲ್ಲದೆ ತಿನ್ನಿರಿ; ಅದು ಅತಿ ಪರಿಶುದ್ಧವಾದದ್ದು.

13ನೀವು ಅದನ್ನು ಪರಿಶುದ್ಧವಾದ ಸ್ಥಳದಲ್ಲಿ ತಿನ್ನಬೇಕು. ಬೆಂಕಿಯಿಂದ ಮಾಡಿದ ಕರ್ತನ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಇವು ಸಲ್ಲತಕ್ಕವುಗಳು. ಹೀಗೆ ನಾನು ಆಜ್ಞೆ ಹೊಂದಿದ್ದೇನೆ.

14ನೀನೂ ನಿನ್ನೊಂದಿಗೆ ನಿನ್ನ ಕುಮಾರರೂ ಕುಮಾರ್ತೆಯರೂ ಆಡಿಸುವ ಎದೆಯ ಭಾಗವನ್ನೂ ಪ್ರತ್ಯೇಕಿಸಿದ ಭುಜವನ್ನೂ ಶುದ್ಧ ಸ್ಥಳದಲ್ಲಿ ತಿನ್ನಬೇಕು; ಅವು ಇಸ್ರಾಯೇಲ್‌ ಮಕ್ಕಳ ಸಮಾಧಾನದ ಬಲಿಯ ಯಜ್ಞಗಳಲ್ಲಿ ನಿನಗೂ ನಿನ್ನ ಕುಮಾರರಿಗೂ ಸಲ್ಲುವವುಗಳಾಗಿವೆ.

ಯಾಜಕಕಾಂಡ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी