ಯಾಜಕಕಾಂಡ 14:22

ಅವನಿಂದಾಗುವಷ್ಟು ಎರಡು ಬೆಳವಗಳನ್ನು ಎರಡು ಪಾರಿವಾಳದ ಮರಿಗಳನ್ನು ತಕ್ಕೊಳ್ಳಬೇಕು; ಅವುಗಳಲ್ಲಿ ಒಂದು ಪಾಪಬಲಿಗಾಗಿಯೂ ಇನ್ನೊಂದು ದಹನ ಬಲಿಗಾಗಿಯೂ ಇರುವದು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 14

20ಯಾಜಕನು ದಹನಬಲಿಯನ್ನೂ ಆಹಾರ ಸಮರ್ಪಣೆಯನ್ನೂ ಯಜ್ಞವೇದಿಯ ಮೇಲೆ ಸಮರ್ಪಿಸಬೇಕು. ಇದಲ್ಲದೆ ಯಾಜಕನು ಅವನಿಗೋ ಸ್ಕರ ಪ್ರಾಯಶ್ಚಿತ್ತವನ್ನು ಮಾಡಬೇಕು. ಆಗ ಅವನು ಶುದ್ಧನಾಗಿರುವನು.

21ಅವನು ಬಡವನಾಗಿದ್ದರೆ ಅಷ್ಟೊಂದು ತರುವದಕ್ಕೆ ಆಗದಿದ್ದರೆ ತನ್ನ ಪ್ರಾಯಶ್ಚಿತ್ತ ಅಪರಾಧದ ಬಲಿಗಾಗಿ ಆಡಿಸುವದಕ್ಕೆ ಒಂದು ಕುರಿ ಮರಿಯನ್ನೂ ಎಣ್ಣೆಬೆರೆಸಿದ ಹತ್ತರಲ್ಲೊಂದು ಭಾಗ ನಯವಾದ ಹಿಟ್ಟನ್ನೂ ಒಂದು ಸೇರಿನಷ್ಟು ಎಣ್ಣೆಯನ್ನೂ

22ಅವನಿಂದಾಗುವಷ್ಟು ಎರಡು ಬೆಳವಗಳನ್ನು ಎರಡು ಪಾರಿವಾಳದ ಮರಿಗಳನ್ನು ತಕ್ಕೊಳ್ಳಬೇಕು; ಅವುಗಳಲ್ಲಿ ಒಂದು ಪಾಪಬಲಿಗಾಗಿಯೂ ಇನ್ನೊಂದು ದಹನ ಬಲಿಗಾಗಿಯೂ ಇರುವದು.

23ಅವನು ತನ್ನ ಅಶುದ್ಧತೆ ಗಾಗಿ ಎಂಟನೆಯ ದಿನದಲ್ಲಿ ಇವುಗಳನ್ನು ಸಭೆಯ ಗುಡಾರದ ಬಾಗಿಲ ಬಳಿಗೆ ಯಾಜಕನ ಹತ್ತಿರಕ್ಕೆ ಕರ್ತನ ಎದುರಿನಲ್ಲಿ ತರಬೇಕು.

24ಯಾಜಕನು ಅಪರಾಧದ ಬಲಿಯ ಆ ಕುರಿಮರಿಯನ್ನೂ ಸೇರಿನಷ್ಟು ಎಣ್ಣೆಯನ್ನೂ ತೆಗೆದುಕೊಳ್ಳಬೇಕು. ಯಾಜಕನು ಕರ್ತನ ಸನ್ನಿಧಿಯಲ್ಲಿ ಆಡಿಸುವ ಸಮರ್ಪಣೆಗಾಗಿ ಅವುಗಳನ್ನು ಆಡಿಸಬೇಕು.

ಯಾಜಕಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी