ಇಬ್ರಿಯರಿಗೆ 11:5

ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.

ಸಂದರ್ಭದೊಂದಿಗೆ ಓದಿ · ಇಬ್ರಿಯರಿಗೆ 11

3ನಂಬಿಕೆಯಿಂದಲೇ ಲೋಕಗಳು ದೇವರ ಮಾತಿನಿಂದ ನಿರ್ಮಿತವಾದವೆಂದು ನಾವು ತಿಳುಕೊಂಡದ್ದರಿಂದ ಕಾಣಿಸುವವುಗಳು ದೃಶ್ಯ ವಸ್ತು ಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.

4ನಂಬಿಕೆಯಿಂದಲೇ ಹೇಬೆಲನು ಕಾಯಿನನ ಯಜ್ಞ ಕ್ಕಿಂತ ಅತಿ ಶ್ರೇಷ್ಠವಾದ ಯಜ್ಞವನ್ನು ದೇವರಿಗೆ ಸಮ ರ್ಪಿಸಿದನು. ಅದರ ಮೂಲಕ ಅವನು ನೀತಿವಂತ ನೆಂದು ಸಾಕ್ಷಿ ಹೊಂದಿದನು: ದೇವರು ಅವನ ಕಾಣಿಕೆಗಳ ವಿಷಯವಾಗಿ ಸಾಕ್ಷಿಕೊಟ್ಟನು; ಅವನು ಸತ್ತವನಾಗಿದ್ದರೂ ಅದರಿಂದ ಇನ್ನೂ ಮಾತನಾಡುತ್ತಾನೆ.

5ಹನೋಕನು ಮರಣವನ್ನು ಅನುಭವಿಸದೆ ಒಯ್ಯ ಲ್ಪಟ್ಟದ್ದು ನಂಬಿಕೆಯಿಂದಲೇ; ಅವನನ್ನು ದೇವರು ತೆಗೆದುಕೊಂಡು ಹೋದದರಿಂದ ಅವನು ಯಾರಿಗೂ ಸಿಕ್ಕಲಿಲ್ಲ; ಅವನು ಒಯ್ಯಲ್ಪಡುವದಕ್ಕಿಂತ ಮೊದಲು ದೇವರನ್ನು ಮೆಚ್ಚಿಸುವವನಾಗಿದ್ದನೆಂದು ಸಾಕ್ಷಿ ಉಂಟು.

6ಆದರೆ ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವದು ಅಸಾಧ್ಯ; ಯಾಕಂದರೆ ದೇವರ ಬಳಿಗೆ ಬರುವವನು ದೇವರು ಇದ್ದಾನೆ, ತನ್ನನ್ನು ಜಾಗ್ರತೆಯಾಗಿ ಹುಡುಕು ವವನಿಗೆ ಪ್ರತಿಫಲವನ್ನು ಕೊಡುತ್ತಾನೆ ಎಂದು ನಂಬು ವದು ಅವಶ್ಯ.

7ನಂಬಿಕೆಯಿಂದಲೇ ನೋಹನು ಇನ್ನೂ ಕಾಣದಿದ್ದವುಗಳ ವಿಷಯವಾಗಿ ದೇವರಿಂದ ಎಚ್ಚರಿಸ ಲ್ಪಟ್ಟು ಭಯಗ್ರಸ್ತನಾಗಿ ತನ್ನ ಮನೆಯವರ ರಕ್ಷಣೆಗಾಗಿ ನಾವೆಯನ್ನು ಸಿದ್ಧ ಮಾಡಿದನು. ಆದರಿಂದ ಅವನು ಲೋಕದವರನ್ನು ಖಂಡಿಸಿ ತರುವಾಯ ನಂಬಿಕೆಯಿಂ ದುಂಟಾಗುವ ನೀತಿಗೆ ಬಾಧ್ಯನಾದನು.

ಇಬ್ರಿಯರಿಗೆ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी