ಯೆಶಾಯ 46:7

ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.

ಸಂದರ್ಭದೊಂದಿಗೆ ಓದಿ · ಯೆಶಾಯ 46

5ನನ್ನನ್ನು ಯಾರಿಗೆ ಸರಿಕಟ್ಟಿ ಹೋಲಿಸೀರಿ, (ಇಬ್ಬರು) ನನ್ನ ಸಮಾನರೆಂದು ನನ್ನನ್ನು ಯಾರೊಡನೆ ಸಮ ಮಾಡೀರಿ?

6ಚೀಲದಿಂದ ಚಿನ್ನವನ್ನು ಸುರಿದು ತ್ರಾಸಿ ನಲ್ಲಿ ಬೆಳ್ಳಿಯನ್ನು ತೂಗಿ, ಅಕ್ಕಸಾಲಿಗನಿಗೆ ಕೂಲಿ ಕೊಟ್ಟಾಗ, ಅವನು ಅದನ್ನು ದೇವರನ್ನಾಗಿ ಮಾಡಲು ಅವರು ಅದಕ್ಕೆ ಎರಗಿ ಪೂಜೆ ಮಾಡುವರು.

7ಅವರು ಅದನ್ನು ತಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಅದರ ಸ್ಥಳದಲ್ಲಿ ಇಳಿಸಿ ನಿಲ್ಲಿಸುವರು. ಅದು ಅದರ ಸ್ಥಳದಿಂದ ಜರುಗದು. ಹೌದು, ಒಬ್ಬನು ಕೂಗಿ ಕೊಂಡರೂ ಅದು ಅವನಿಗೆ ಉತ್ತರಕೊಡಲಾರದು ಇಲ್ಲವೆ ಅವನನ್ನು ಕಷ್ಟದಿಂದ ರಕ್ಷಿಸಲಾರದು.

8ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು, ನಿಮ್ಮನ್ನು ಮನುಷ್ಯರೆಂದು ತೋರಿಸಿರಿ, ಅದನ್ನು ತಿರುಗಿ ನಿಮ್ಮ ಮನಸ್ಸಿಗೆ ತಂದುಕೊಳ್ಳಿರಿ;

9ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಮತ್ತೊಬ್ಬನಿಲ್ಲ; ನಾನೇ ದೇವರು, ನನಗೆ ಸರಿಸಮಾ ನನು ಇಲ್ಲ.

ಯೆಶಾಯ 46 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी