೧ ಯೋಹಾನನು 3:14

ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.

ಸಂದರ್ಭದೊಂದಿಗೆ ಓದಿ · ೧ ಯೋಹಾನನು 3

12ಕೆಡುಕ ನಾಗಿದ್ದು ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನ ನಂತೆ ಅಲ್ಲ. ಯಾವ ಕಾರಣದಿಂದ ಅವನನ್ನು ಕೊಂದು ಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದದರಿಂದಲೇ.

13ನನ್ನ ಸಹೋದರರೇ, ಲೋಕವು ನಿಮ್ಮನ್ನು ದ್ವೇಷಿಸಿದರೆ ಆಶ್ಚರ್ಯಪಡಬೇಡಿರಿ.

14ನಾವಂತೂ ಸಹೋದರರನ್ನು ಪ್ರೀತಿಸುವವರಾಗಿರುವದರಿಂದ ಮರಣದಿಂದ ಪಾರಾಗಿ ಜೀವದಲ್ಲಿ ಸೇರಿದ್ದೇವೆಂಬದು ನಮಗೆ ಗೊತ್ತಾಗಿದೆ. ತನ್ನ ಸಹೋದರನನ್ನು ಪ್ರೀತಿಸದೆ ಇರುವವನು ಮರಣದಲ್ಲೇ ಇದ್ದಾನೆ.

15ಯಾರಾದರೂ ತನ್ನ ಸಹೋದರನನ್ನು ದ್ವೇಷಿಸುವ ವನು ಕೊಲೆಗಾರನಾಗಿದ್ದಾನೆ. ಯಾವ ಕೊಲೆಗಾರ ನಲ್ಲಿಯೂ ನಿತ್ಯಜೀವವು ಇರುವದಿಲ್ಲವೆಂಬದು ನಿಮಗೆ ಗೊತ್ತಾಗಿದೆ.

16ಆತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದ್ದರಲ್ಲಿಯೇ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.

೧ ಯೋಹಾನನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी