ಆದಿಕಾಂಡ 20:3

ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 20

1ಅಬ್ರಹಾಮನು ಅಲ್ಲಿಂದ ದಕ್ಷಿಣ ದೇಶದ ಕಾದೇಶಿಗೆ ಪ್ರಯಾಣಮಾಡಿ, ಶೂರಿಗೆ ಮಧ್ಯದಲ್ಲಿ ವಾಸಿಸಿ ಗೆರಾರಿನಲ್ಲಿ ಪ್ರವಾಸಿಯಾಗಿದ್ದನು.

2ಅಬ್ರಹಾಮನು ತನ್ನ ಹೆಂಡತಿಯಾದ ಸಾರಳ ವಿಷಯವಾಗಿ--ಅವಳು ನನ್ನ ತಂಗಿ ಎಂದು ಹೇಳಿ ದನು. ಆದದರಿಂದ ಗೆರಾರಿನ ಅರಸನಾದ ಅಬೀಮೆಲೆ ಕನು ಸಾರಳನ್ನು ಕರೆಯಿಸಿ ತೆಗೆದುಕೊಂಡನು.

3ಆಗ ದೇವರು ರಾತ್ರಿ ಕನಸಿನಲ್ಲಿ ಅಬೀಮೆಲೆಕನ ಬಳಿಗೆ ಬಂದು--ಇಗೋ, ನೀನು ತಕ್ಕೊಂಡ ಆ ಸ್ತ್ರೀಗೋಸ್ಕರ ನೀನು ಸತ್ತವನೇ; ಆಕೆಯು ಒಬ್ಬ ಮನುಷ್ಯನ ಹೆಂಡತಿ ಎಂದು ಅವನಿಗೆ ಹೇಳಿದನು.

4ಆದರೆ ಅಬೀಮೆಲೆಕನು ಆಕೆಯ ಸವಿಾಪಕ್ಕೆ ಬಂದಿರಲಿಲ್ಲ. ಆದದರಿಂದ ಅವನು--ಕರ್ತನೇ, ನೀತಿಯುಳ್ಳ ಜನಾಂಗವನ್ನು ಸಹ ಕೊಲ್ಲುವಿಯೋ?

5ಅವನು ನನಗೆ--ಅವಳು ನನ್ನ ತಂಗಿ ಎಂದು ಹೇಳಲಿಲ್ಲವೋ? ಈಕೆಯೂ--ಅವನು ನನ್ನ ಅಣ್ಣನು ಎಂದು ಹೇಳಿದ್ದಾಳೆ; ಆದದರಿಂದ ಯಥಾರ್ಥವಾದ ಹೃದಯದಿಂದಲೂ ನಿರಪರಾಧದ ಕೈಯಿಂದಲೂ ಇದನ್ನು ಮಾಡಿದ್ದೇನೆ ಅಂದನು.

ಆದಿಕಾಂಡ 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी