ಯೆರೆಮಿಯ 23:5

ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.

ಸಂದರ್ಭದೊಂದಿಗೆ ಓದಿ · ಯೆರೆಮಿಯ 23

3ನಾನು ನನ್ನ ಮಂದೆಯ ಶೇಷವನ್ನು, ಅವರನ್ನು ಓಡಿಸಿಬಿಟ್ಟ ಎಲ್ಲಾ ದೇಶಗಳಿಂದ ಕೂಡಿಸಿ ತಮ್ಮ ಹಟ್ಟಿಗಳಿಗೆ ತಿರುಗಿ ತರುವೆನು; ಅವರು ಫಲಕಾರಿಯಾಗಿ ಹೆಚ್ಚುವರು.

4ಅವರನ್ನು ಮೇಯಿಸತಕ್ಕ ಕುರುಬರನ್ನು ಅವರ ಮೇಲೆ ಇಡುತ್ತೇನೆ; ಅವರು ಇನ್ನು ಮೇಲೆ ಭಯಪಡುವದೇ ಇಲ್ಲ, ಅಂಜುವದಿಲ್ಲ, ಕೊರತೆಪಡುವದಿಲ್ಲ ಎಂದು ಕರ್ತನು ಅನ್ನುತ್ತಾನೆ.

5ಇಗೋ, ದಿನಗಳು ಬರುವವೆಂದು ಕರ್ತನು ಅನ್ನು ತ್ತಾನೆ; ಆಗ ನಾನು ದಾವೀದನಿಗೆ ನೀತಿಯುಳ್ಳ ಚಿಗುರನ್ನು ಎಬ್ಬಿಸುತ್ತೇನೆ; ಅರಸನು ರಾಜ್ಯವಾಳಿ ವೃದ್ಧಿಯಾಗುವನು; ಭೂಮಿಯಲ್ಲಿ ನ್ಯಾಯವನ್ನೂ ನೀತಿಯನ್ನೂ ನಡಿಸು ವನು.

6ಅವನ ದಿನಗಳಲ್ಲಿ ಯೆಹೂದವು ರಕ್ಷಿಸಲ್ಪಡು ವದು; ಇಸ್ರಾಯೇಲು ಭದ್ರವಾಗಿ ವಾಸಿಸುವದು; ಆತನು ಕರೆಯಲ್ಪಡುವ ಹೆಸರು ಯಾವದಂದರೆ--ನಮ್ಮ ನೀತಿಯು ಕರ್ತನೇ.

7ಆದದರಿಂದ ಇಗೋ, ದಿನಗಳು ಬರುತ್ತವೆಂದು ಕರ್ತನು ಅನ್ನುತ್ತಾನೆ; ಆಗ ಇಸ್ರಾಯೇಲಿನ ಮಕ್ಕಳನ್ನು ಐಗುಪ್ತದೇಶದೊಳಗಿಂದ ಬರಮಾಡಿದ ಕರ್ತನ ಜೀವದಾಣೆ ಎಂದು ಹೇಳುವದೇ ಇಲ್ಲ.

ಯೆರೆಮಿಯ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी