೨ ಸಮುವೇಲನು 2:4

ಆಗ ಯೆಹೂದ ಜನರು ಬಂದು ಅಲ್ಲಿ ದಾವೀದನನ್ನು ಯೆಹೂದನ ಮನೆಯವರ ಮೇಲೆ ಅರಸನನ್ನಾಗಿ ಅಭಿಷೇಕಿಸಿದರು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 2

2ಹಾಗೆಯೇ ದಾವೀದನೂ ಅವನ ಇಬ್ಬರು ಹೆಂಡತಿಯರಾದ ಇಜ್ರೇಲಿಯವಳಾಗಿರುವ ಅಹಿನೋವಮಳೂ ಕರ್ಮೆ ಲ್ಯನನಾದ ನಾಬಾಲನ ಹೆಂಡತಿಯಾಗಿದ್ದ ಅಬೀ ಗೈಲಳೂ ಅಲ್ಲಿಗೆ ಹೋದರು.

3ಇದಲ್ಲದೆ ತನ್ನ ಸಂಗಡ ಇದ್ದ ಜನರನ್ನೂ ಅವರವರ ಮನೆಯವರನ್ನೂ ಕರಕೊಂಡು ಹೋದನು; ಅವರು ಹೆಬ್ರೋನಿನ ಪಟ್ಟಣ ಗಳಲ್ಲಿ ವಾಸವಾಗಿದ್ದರು.

4ಆಗ ಯೆಹೂದ ಜನರು ಬಂದು ಅಲ್ಲಿ ದಾವೀದನನ್ನು ಯೆಹೂದನ ಮನೆಯವರ ಮೇಲೆ ಅರಸನನ್ನಾಗಿ ಅಭಿಷೇಕಿಸಿದರು.

5ಯಾಬೇಷ್‌ಗಿಲ್ಯಾದಿನವರು ಸೌಲನನ್ನು ಹೂಣಿಟ್ಟ ರೆಂದು ದಾವೀದನಿಗೆ ತಿಳಿಸಿದಾಗ ಅವನು ದೂತರನ್ನು ಕಳುಹಿಸಿ--ನೀವು ನಿಮ್ಮ ಯಜಮಾನನಾದ ಸೌಲನಿಗೆ ಈ ದಯೆಯನ್ನು ತೋರಿಸಿ ಅವನನ್ನು ಹೂಣಿಟ್ಟ ಕಾರಣ ಕರ್ತನಿಂದ ನಿಮಗೆ ಆಶೀರ್ವಾದವಾಗಲಿ.

6ಈಗ ಕರ್ತನು ನಿಮಗೆ ದಯೆಯನ್ನೂ ಸತ್ಯವನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು.

೨ ಸಮುವೇಲನು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी