೧ ಅರಸುಗಳು 8:35

ಅವರು ನಿನಗೆ ವಿರೋಧವಾಗಿ ಪಾಪವನ್ನು ಮಾಡಿದ ಕಾರಣ ಆಕಾಶವು ಮುಚ್ಚಲ್ಪಟ್ಟು ಮಳೆ ಇಲ್ಲದಿರುವಾಗ ನೀನು ಅವರನ್ನು ಕುಂದಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥನೆಮಾಡಿ ನಿನ್ನ ನಾಮವನ್ನು ಅರಿಕೆಮಾಡಿ ತಮ್ಮ ಪಾಪದಿಂದ ತಿರುಗಿ ಕೊಂಡರೆ

ಸಂದರ್ಭದೊಂದಿಗೆ ಓದಿ · ೧ ಅರಸುಗಳು 8

33ನಿನ್ನ ಜನರಾದ ಇಸ್ರಾಯೇಲ್ಯರು ನಿನಗೆ ವಿರೋಧ ವಾಗಿ ಪಾಪಮಾಡಿದ್ದರಿಂದ ಶತ್ರುವಿನ ಮುಂದೆ ಹೊಡೆ ಯಲ್ಪಟ್ಟು ನಿನ್ನ ಕಡೆಗೆ ತಿರುಗಿಕೊಂಡು ನಿನ್ನ ಹೆಸರನ್ನು ಅರಿಕೆಮಾಡಿ ಪ್ರಾರ್ಥಿಸಿ

34ಈ ಮನೆಯಲ್ಲಿ ನಿನಗೆ ವಿಜ್ಞಾಪನೆ ಮಾಡಿದರೆ ಆಗ ನೀನು ಪರಲೋಕದಿಂದ ಕೇಳಿ ನಿನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನು ಮನ್ನಿಸಿ ನೀನು ಅವರ ತಂದೆಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡು.

35ಅವರು ನಿನಗೆ ವಿರೋಧವಾಗಿ ಪಾಪವನ್ನು ಮಾಡಿದ ಕಾರಣ ಆಕಾಶವು ಮುಚ್ಚಲ್ಪಟ್ಟು ಮಳೆ ಇಲ್ಲದಿರುವಾಗ ನೀನು ಅವರನ್ನು ಕುಂದಿಸಿದ್ದರಿಂದ ಅವರು ಈ ಸ್ಥಳದ ಕಡೆಗೆ ಪ್ರಾರ್ಥನೆಮಾಡಿ ನಿನ್ನ ನಾಮವನ್ನು ಅರಿಕೆಮಾಡಿ ತಮ್ಮ ಪಾಪದಿಂದ ತಿರುಗಿ ಕೊಂಡರೆ

36ಆಗ ನೀನು ಪರಲೋಕದಿಂದ ಕೇಳಿ ನಿನ್ನ ಸೇವಕರಾದ ಇಸ್ರಾಯೇಲ್‌ ಜನರ ಪಾಪವನ್ನು ಮನ್ನಿಸಿ ಅವರು ನಡಿಯಬೇಕಾದ ಸನ್ಮಾರ್ಗವನ್ನು ಅವರಿಗೆ ಕಲಿಸುವ ಹಾಗೆ ನಿನ್ನ ಜನರಿಗೆ ಬಾಧ್ಯತೆಯಾಗಿ ಕೊಟ್ಟ ಭೂಮಿಯ ಮೇಲೆ ಮಳೆಯನ್ನು ಕೊಡು.

37ದೇಶದಲ್ಲಿ ಬರವೂ ಉರಿಗಾಳಿಯೂ ಕಾಡಿ ಗೆಯೂ ಬಾಣತಿ ರೋಗವಾದರೂ ಮಿಡಿತೆಯಾದರೂ ಕಂಬಳಿ ಹುಳವಾದರೂ ಅವರ ಶತ್ರುಗಳು ಅವರ ಸ್ವದೇಶದ ಪಟ್ಟಣಗಳಲ್ಲಿ ಅವರನ್ನು ಹಿಂಸಿಸಿದರೂ ಯಾವ ಬಾಧೆ, ಯಾವ ಬೇನೆ ಇದ್ದರೂ

೧ ಅರಸುಗಳು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी