ಒಹೊಲಳು ನನ್ನ ವಶವಾಗಿರುವಾಗ ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯ ದವರನ್ನು,
3ಅವರು ಐಗುಪ್ತದಲ್ಲಿ ವ್ಯಭಿಚಾರ ಮಾಡುತ್ತಿದ್ದರು. ಅವರು ಎಳೆಯ ಪ್ರಾಯದಲ್ಲಿ ವ್ಯಭಿಚಾರ ಮಾಡಿದ್ದ ರಿಂದ ಕನ್ಯಾವಸ್ಥೆಯ ಅವರ ಸ್ತನಗಳು ಹಿಸುಕಲ್ಪಟ್ಟವು; ಅವುಗಳ ತೊಟ್ಟುಗಳು ನಸುಕಲ್ಪಟ್ಟವು.
4ಅವರುಗಳ ಹೆಸರುಗಳೇನಂದರೆ ಒಹೊಲ ಎಂಬವಳು ದೊಡ್ಡವಳು ಒಹೊಲೀಬ ಎಂಬವಳು ಚಿಕ್ಕವಳು; ಅವರು ನನ್ನವ ರಾಗಿದ್ದು ಕುಮಾರ ಮತ್ತು ಕುಮಾರ್ತೆಯರನ್ನು ಹೆತ್ತರು; ಅವರ ಹೆಸರು ಹೀಗೆ--ಒಹೋಲ ಎಂಬದು ಸಮಾ ರ್ಯವು ಮತ್ತು ಒಹೊಲೀಬ ಎಂಬದು ಯೆರೂಸ ಲೇಮು.
5ಒಹೊಲಳು ನನ್ನ ವಶವಾಗಿರುವಾಗ ಅವಳು ತನ್ನ ಪ್ರಿಯರನ್ನು, ತನ್ನ ನೆರೆಯವರಾದ ಅಶ್ಶೂರ್ಯ ದವರನ್ನು,
6ಅವರೆಲ್ಲರೂ ನೀಲಿಯಿಂದ ಹೊದಿಸಲ್ಪಟ್ಟ (ಧರಿಸಲ್ಪಟ್ಟ) ಯೋಧರು (ಮುಖಂಡರೂ) ಅಧಿಕಾರ ಸ್ಥರೂ ಅಪೇಕ್ಷಿಸತಕ್ಕ ಯೌವನಸ್ಥರೂ ಕುದುರೆಗಳ ಮೇಲೆ ಸವಾರಿ ಮಾಡುವ ರಾಹುತರೂ ಆಗಿರುವ ಅಂಥವರನ್ನು, ಮೋಹಿಸಿದಳು.
7ಅವರಿಗೆ ಅವಳು ತನ್ನನ್ನು ವ್ಯಭಿಚಾರಿಣಿಯಾಗಿ ಒಪ್ಪಿಸಿದಳು, ಅವರೆಲ್ಲರೂ ಅಶ್ಶೂರದಲ್ಲಿ ಆರಿಸಲ್ಪಟ್ಟವರಾಗಿದ್ದರು. (ನೇಮಿಸ ಲ್ಪಟ್ಟವರು) ಅವಳು ಯಾರನ್ನು ಮೋಹಿಸಿದಳೋ ಅವರ ವಿಗ್ರಹಗಳಿಂದ ತನ್ನನ್ನು ಅಪವಿತ್ರಪಡಿಸಿಕೊಂಡಳು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ