ಮತ್ತಾಯನು 23:29

ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.

ಸಂದರ್ಭದೊಂದಿಗೆ ಓದಿ · ಮತ್ತಾಯನು 23

27ಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಸುಣ್ಣಾ ಹಚ್ಚಿದ ಸಮಾಧಿ ಗಳಿಗೆ ಹೋಲಿಕೆಯಾಗಿದ್ದೀರಿ. ಅವು ಹೊರಗೆ ನಿಜಕ್ಕೂ ಅಂದವಾಗಿ ಕಾಣುತ್ತವೆ; ಆದರೆ ಒಳಗೆ ಸತ್ತವರ ಎಲುಬು ಗಳಿಂದಲೂ ಎಲ್ಲಾ ಅಶುದ್ಧತೆಯಿಂದಲೂ ತುಂಬಿರು ತ್ತವೆ.

28ಅದರಂತೆಯೇ ನೀವು ಸಹ ಹೊರಗಡೆ ಮನುಷ್ಯರಿಗೆ ನೀತಿವಂತರಂತೆ ಕಾಣಿಸಿಕೊಳ್ಳುತ್ತೀರಿ; ಆದರೆ ನೀವು ಒಳಗೆ ಕಪಟದಿಂದಲೂ ದುಷ್ಟತನ ದಿಂದಲೂ ತುಂಬಿದವರಾಗಿದ್ದೀರಿ.

29ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನಿಮಗೆ ಅಯ್ಯೋ! ಯಾಕಂದರೆ ನೀವು ಪ್ರವಾದಿಗಳ ಸಮಾಧಿಗಳನ್ನು ಕಟ್ಟಿ ನೀತಿವಂತರ ಸಮಾಧಿಗಳನ್ನು ಅಲಂಕರಿಸುತ್ತೀರಿ.

30ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ.

31ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ.

ಮತ್ತಾಯನು 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी