೧ ಅರಸುಗಳು 19:3

ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 19

1ಎಲೀಯನು ಮಾಡಿದ್ದೆಲ್ಲವನ್ನೂ ಅವನು ಕತ್ತಿಯಿಂದ ಎಲ್ಲಾ ಪ್ರವಾದಿಗಳನ್ನು ಕೊಂದುಹಾಕಿದ್ದೆಲ್ಲವನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದಾಗ,

2ಈಜೆಬೆಲಳು ಎಲೀಯನ ಬಳಿಗೆ ದೂತ ನನ್ನು ಕಳುಹಿಸಿ--ನಾನು ನಾಳೆ ಇಷ್ಟು ಹೊತ್ತಿಗೆ ಅವ ರಲ್ಲಿರುವ ಒಬ್ಬೊಬ್ಬನ ಪ್ರಾಣದ ಹಾಗೆ ನಿನ್ನ ಪ್ರಾಣಕ್ಕೂ ಮಾಡದೆ ಹೋದರೆ ದೇವರುಗಳು ನನಗೆ ಹೀಗೆಯೂ ಹೆಚ್ಚಾಗಿಯೂ ಮಾಡಲಿ ಎಂದು ಹೇಳಿದಳು.

3ಅವನು ಅದನ್ನು ಕೇಳಿ ಎದ್ದು ತನ್ನ ಪ್ರಾಣಕ್ಕೋಸ್ಕರ ಯೆಹೂದಕ್ಕೆ ಸೇರಿದ ಬೇರ್ಷೆಬಕ್ಕೆ ಹೊರಟುಹೋಗಿ ಅಲ್ಲಿ ತನ್ನ ಸೇವಕನನ್ನು ಬಿಟ್ಟನು.

4ಆದರೆ ಅವನು ಅರಣ್ಯದಲ್ಲಿ ಒಂದು ದಿವಸದ ಪ್ರಯಾಣ ಮಾಡಿ ಷಿಟ್ಟೀಮ್‌ ಮರದ ಕೆಳಗೆ ಕುಳಿತು ತಾನು ಸಾಯಬೇಕೆಂದು ಬೇಡಿ ಕೊಂಡು--ಕರ್ತನೇ, ಈಗ ಸಾಕು; ನನ್ನ ಪ್ರಾಣವನ್ನು ತೆಗೆದುಕೋ. ಯಾಕಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ ಅಂದನು.

5ಅವನು ಷಿಟ್ಟೀಮ್‌ ಮರದ ಕೆಳಗೆ ಮಲಗಿಕೊಂಡು ನಿದ್ರೆಮಾಡುತ್ತಿರುವಾಗ ಇಗೋ, ಒಬ್ಬ ದೂತನು ಅವನನ್ನು ತಟ್ಟಿ ಅವನಿಗೆಎದ್ದು ತಿನ್ನು ಅಂದನು.

೧ ಅರಸುಗಳು 19 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी