ಯೋಹಾನನು 17:4

ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ;

ಸಂದರ್ಭದೊಂದಿಗೆ ಓದಿ · ಯೋಹಾನನು 17

2ನೀನು ಆತನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರಿಗೆ ಆತನು ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿದ್ದೀ.

3ಒಬ್ಬನೇ ಸತ್ಯದೇವರಾಗಿರುವ ನಿನ್ನನ್ನೂ ನೀನು ಕಳುಹಿಸಿಕೊಟ್ಟ ಯೇಸು ಕ್ರಿಸ್ತನನ್ನೂ ಅವರು ಅರಿತು ಕೊಳ್ಳುವದೇ ನಿತ್ಯಜೀವ.

4ನಾನು ನಿನ್ನನ್ನು ಭೂಮಿಯ ಮೇಲೆ ಮಹಿಮೆಪಡಿಸಿದ್ದೇನೆ; ನೀನು ನನಗೆ ಕೊಟ್ಟ ಕೆಲಸವನ್ನು ನಾನು ಮುಗಿಸಿದ್ದೇನೆ;

5ಓ ತಂದೆಯೇ, ಹೀಗೆ ಲೋಕವು ಇದ್ದದ್ದಕ್ಕಿಂತ ಮುಂಚೆ ನಿನ್ನೊಂದಿಗೆ ನನಗಿದ್ದ ಮಹಿಮೆಯಿಂದ ನೀನು ಸ್ವತಃ ನನ್ನನ್ನು ಮಹಿಮೆಪಡಿಸು.

6ಲೋಕದೊಳಗಿಂದ ನೀನು ನನಗೆ ಕೊಟ್ಟ ಮನು ಷ್ಯರಿಗೆ ನಾನು ನಿನ್ನ ಹೆಸರನ್ನು ಪ್ರತ್ಯಕ್ಷಪಡಿಸಿದ್ದೇನೆ. ಅವರು ನಿನ್ನವರಾಗಿದ್ದರು; ನೀನು ಅವರನ್ನು ನನಗೆ ಕೊಟ್ಟಿದ್ದೀ; ಇದಲ್ಲದೆ ಅವರು ನಿನ್ನ ವಾಕ್ಯವನ್ನು ಕೈ ಕೊಂಡಿದ್ದಾರೆ.

ಯೋಹಾನನು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी