ನ್ಯಾಯಸ್ಥಾಪಕರು 11:17

ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ--ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆಆಗಬೇಕು ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದದ ರಿಂದ ಇಸ್ರಾಯೇಲ್ಯರು ಕಾದೇಶಿನಲ್ಲಿ ವಾಸಮಾಡಿದರು.

ಸಂದರ್ಭದೊಂದಿಗೆ ಓದಿ · ನ್ಯಾಯಸ್ಥಾಪಕರು 11

15ಅವರಿಗೆ--ಯೆಫ್ತಾಹನು ಹೇಳುವ ಮಾತು ಇದೇ--ಇಸ್ರಾಯೇಲ್‌ ಮೋವಾಬಿನ ದೇಶವನ್ನಾ ದರೂ ಅಮ್ಮೋನನ ಮಕ್ಕಳ ದೇಶವನ್ನಾದರೂ ತಕ್ಕೊಂಡ ದ್ದಿಲ್ಲ.

16ಆದರೆ ಇಸ್ರಾಯೇಲು ಐಗುಪ್ತದಿಂದ ಬರು ವಾಗ ಅರಣ್ಯದಲ್ಲಿ ಕೆಂಪು ಸಮುದ್ರದ ವರೆಗೆ ನಡೆದು ಕಾದೇಶಿಗೆ ಬಂದು

17ಎದೋಮಿನ ಅರಸನ ಬಳಿಗೆ ದೂತರನ್ನು ಕಳುಹಿಸಿ--ನಾನು ನಿನ್ನ ದೇಶವನ್ನು ಹಾದು ಹೋಗಲು ಅಪ್ಪಣೆಆಗಬೇಕು ಎಂದು ಹೇಳಿದರು. ಆದರೆ ಎದೋಮಿನ ಅರಸನು ಕೇಳದೆ ಹೋದನು. ಅವರು ಮೋವಾಬಿನ ಅರಸನ ಬಳಿಗೂ ಹಾಗೆಯೇ ಕಳುಹಿಸಿದರು; ಅವನೂ ಒಪ್ಪದೆ ಹೋದನು. ಆದದ ರಿಂದ ಇಸ್ರಾಯೇಲ್ಯರು ಕಾದೇಶಿನಲ್ಲಿ ವಾಸಮಾಡಿದರು.

18ಅರಣ್ಯದಲ್ಲಿ ನಡೆದು ಎದೋಮ್‌ ದೇಶವನ್ನೂ ಮೋವಾಬ್‌ ದೇಶವನ್ನೂ ಸುತ್ತಿಕೊಂಡು ಹೋಗಿ ಮೋವಾಬ್‌ ದೇಶದ ಪೂರ್ವ ದಿಕ್ಕಿಗೆ ಬಂದು ಮೋವಾಬಿನ ಮೇರೆಯೊಳಗೆ ಪ್ರವೇಶಿಸದೆ ಮೋವಾ ಬಿನ ಮೇರೆಯಾದ ಅರ್ನೋನಿನ ಆಚೆಯಲ್ಲಿ ಇಳು ಕೊಂಡರು.

19ಇಸ್ರಾಯೇಲು ಹೆಷ್ಬೋನಿನ ಅರಸನಾ ದಂಥ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದನು. ಅವರು--ನನ್ನ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವದಕ್ಕೆ ಅಪ್ಪಣೆಕೊಡಬೇಕು ಅಂದರು.

ನ್ಯಾಯಸ್ಥಾಪಕರು 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी