೨ ತಿಮೊಥೆಯನಿಗೆ 1:5

ನಿನ್ನಲ್ಲಿರುವ ನಿಷ್ಕಪಟ ವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ಮೊದಲು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು: ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ನಾನು ದೃಢವಾಗಿ ನಂಬಿದ್ದೇನೆ.

ಸಂದರ್ಭದೊಂದಿಗೆ ಓದಿ · ೨ ತಿಮೊಥೆಯನಿಗೆ 1

3ನಾನು ಹಗಲಿರುಳು ನನ್ನ ಪ್ರಾರ್ಥನೆಗಳಲ್ಲಿ ನಿನ್ನನ್ನು ತಪ್ಪದೆ ಜ್ಞಾಪಕ ಮಾಡುತ್ತೇನೆ. ಇದಲ್ಲದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ನಾನು ನನ್ನ ಪೂರ್ವಿಕ ರನ್ನು ಅನುಸರಿಸಿ ದೇವರನ್ನು ಸೇವಿಸಿ ಸ್ತೋತ್ರ ಸಲ್ಲಿಸು ತ್ತೇನೆ.

4ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಹಳವಾಗಿ ಅಪೇಕ್ಷಿಸುತ್ತೇನೆ;

5ನಿನ್ನಲ್ಲಿರುವ ನಿಷ್ಕಪಟ ವಾದ ನಂಬಿಕೆಯು ನನ್ನ ನೆನಪಿಗೆ ಬಂತು. ಆ ನಂಬಿಕೆಯು ಮೊದಲು ನಿನ್ನ ಅಜ್ಜಿಯಾದ ಲೋವಿಯಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು: ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ನಾನು ದೃಢವಾಗಿ ನಂಬಿದ್ದೇನೆ.

6ಆದಕಾರಣ ನಾನು ನಿನಗೆ ಹಸ್ತಾರ್ಪಣ ಮಾಡು ವದರ ಮೂಲಕ ನಿನಗೆ ದೊರಕಿದ ದೇವರ ವರವು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನಗೆ ಜ್ಞಾಪಕ ಮಾಡುತ್ತೇನೆ.

7ದೇವರು ನಮಗೆ ಕೊಟ್ಟಿರುವ ಆತ್ಮವು ಬಲ ಪ್ರೀತಿ ಸ್ವಸ್ಥಬುದ್ಧಿಯ ಆತ್ಮವೇ ಹೊರತು ಭಯದ ಆತ್ಮವಲ್ಲ.

೨ ತಿಮೊಥೆಯನಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी