ಯೆಹೆಜ್ಕೇಲನು 38:19

ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನ ಇಸ್ರಾಯೇಲ್‌ ದೇಶದಲ್ಲಿ ಮಹಾಕಂಪನ ಉಂಟಾಗು ವದು;

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 38

17ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಯಾವನ ವಿಷಯವಾಗಿ ನನ್ನ ಸೇವಕರಾದ ಇಸ್ರಾಯೇಲಿನ ಪ್ರವಾದಿಗಳಿಂದ ಪೂರ್ವಕಾಲದಲ್ಲಿ ಮಾತನಾಡಿದೆನೋ ಅವನು ನೀನೇ ಅಲ್ಲವೇ? ನಿನ್ನನ್ನು ಅವರಿಗೆ ವಿರೋಧವಾಗಿ ಬರ ಮಾಡುತ್ತೇನೆಂದು ಆ ದಿನಗಳಲ್ಲಿ ಅನೇಕ ವರ್ಷಗ ಳಿಗೆ ಮುಂಚೆ ಪ್ರವಾದಿಸಿದರಲ್ಲವೇ?

18ಆ ದಿನದಲ್ಲಿ ಗೋಗನು ಇಸ್ರಾಯೇಲ್‌ ದೇಶಕ್ಕೆ ವಿರೋಧವಾಗಿ ಬರುವಾಗ ರೋಷವು ನನ್ನ ಮುಖದ ಮೇಲೆ ಬರುವದೆಂದು ದೇವರಾದ ಕರ್ತನು ಹೇಳುತ್ತಾನೆ.

19ನನ್ನ ಈ ರೋಷದಲ್ಲಿ ಮತ್ತು ನನ್ನ ಕೋಪದ ಬೆಂಕಿಯಲ್ಲಿ ನಾನು ಮಾತನಾಡುತ್ತೇನೆ. ನಿಶ್ಚಯವಾಗಿ ಆ ದಿನ ಇಸ್ರಾಯೇಲ್‌ ದೇಶದಲ್ಲಿ ಮಹಾಕಂಪನ ಉಂಟಾಗು ವದು;

20ಆಗ ಸಮುದ್ರದ ವಿಾನುಗಳು ಆಕಾಶದ ಪಕ್ಷಿಗಳು ಬಯಲಿನ ಮೃಗಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಎಲ್ಲಾ ಜಂತುಗಳು, ಭೂಮಿಯ ಎಲ್ಲಾ ಮನುಷ್ಯರ ಸಂಗಡ ನನ್ನ ಸಮ್ಮುಖದಲ್ಲಿ ನಡುಗುವವು; ಪರ್ವತಗಳು ಕೆಡವಲ್ಪಡುವವು, ಇಳಿ ಜಾರುಗಳು ಬೀಳುವವು, ಪ್ರತಿಯೊಂದು ಗೋಡೆಯೂ ನೆಲಕ್ಕೆ ಉರುಳುವವು.

21ನನ್ನ ಎಲ್ಲಾ ಪರ್ವತಗಳಲ್ಲೂ ನಾನು ಅವನಿಗೆ ವಿರುದ್ಧವಾಗಿ ಕತ್ತಿಯನ್ನು ಕರೆಯುವೆ ನೆಂದೂ ದೇವರಾದ ಕರ್ತನು ಹೇಳುತ್ತಾನೆ; ಪ್ರತಿ ಯೊಬ್ಬ ಮನುಷ್ಯನ ಕತ್ತಿಯೂ ಅವನ ಸಹೋದರನಿಗೆ ವಿರೋಧವಾಗಿರುವದು.

ಯೆಹೆಜ್ಕೇಲನು 38 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी