ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
1ಆಮೇಲೆ ಇಸ್ರಾಯೇಲಿನ ಹಿರಿಯರಲ್ಲಿ ಕೆಲವರು ನನ್ನ ಬಳಿಗೆ ಬಂದು ನನ್ನ ಮುಂದೆ ಕುಳಿತುಕೊಂಡರು.
2ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ--
3ಮನುಷ್ಯಪುತ್ರನೇ, ಈ ಮನು ಷ್ಯರು ತಮ್ಮ ವಿಗ್ರಹಗಳನ್ನು ತಮ್ಮ ಹೃದಯಗಳಲ್ಲೇ ಸ್ಥಾಪಿಸಿ ತಮ್ಮ ಅಕ್ರಮವಾದ ಎಡೆತಡೆಗಳನ್ನು ತಮ್ಮ ಮುಖದ ಮುಂದೆಯೇ ಇಟ್ಟುಕೊಂಡಿದ್ದಾರೆ. ಇವರೆಲ್ಲ ರನ್ನೂ ನಾನು ವಿಚಾರಿಸಬೇಕೇ?
4ಆದದರಿಂದ ನೀನು ಅವರ ಸಂಗಡ ಮಾತನಾಡಿ ಹೇಳಬೇಕಾದದ್ದೇನಂದರೆ --ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಮನೆತನದವರ ಪ್ರತಿಯೊಬ್ಬನೂ ತಮ್ಮ ವಿಗ್ರಹಗಳನ್ನು ಹೃದಯಗಳಲ್ಲಿ ನೆಲೆಗೊಳಿಸಿ ಅಕ್ರಮದ ಎಡೆತಡೆಗಳನ್ನು ತಮ್ಮ ಮುಂದೆ ಇಟ್ಟುಕೊಂಡು ಪ್ರವಾ ದಿಯ ಬಳಿಗೆ ಬರುವ ಮನುಷ್ಯನು ಯಾವನೋ ಅವನಿಗೆ ಕರ್ತನಾದ ನಾನು ಅವರ ವಿಗ್ರಹಗಳ ಸಮೂ ಹಕ್ಕೆ ತಕ್ಕ ಹಾಗೆ ಉತ್ತರ ಕೊಡುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ