ಯೆಹೋಶುವ 10:41

ಯೆಹೋಶುವನು ಕಾದೇಶ್‌ ಬರ್ನೇಯದಿಂದ ಗಾಜದ ವರೆಗೂ ಇರುವವರನ್ನೂ ಗೋಷೆನಿನ ಸಮಸ್ತ ದೇಶವನ್ನೂ ಗಿಬ್ಯೋನಿನ ವರೆಗೆ ಹೊಡೆದುಬಿಟ್ಟನು.

ಸಂದರ್ಭದೊಂದಿಗೆ ಓದಿ · ಯೆಹೋಶುವ 10

39ಅದನ್ನೂ ಅದರ ಅರಸನನ್ನೂ ಸಮಸ್ತ ಪಟ್ಟಣ ಗಳನ್ನೂ ಹಿಡಿದು ಅವುಗಳನ್ನು ಕತ್ತಿಯಿಂದ ಹೊಡೆದು ಅದರಲ್ಲಿರುವ ಸಮಸ್ತ ಪ್ರಾಣಗಳನ್ನು ಒಬ್ಬನನ್ನಾ ದರೂ ಉಳಿಸದೆ ಸಂಪೂರ್ಣ ನಾಶಮಾಡಿದನು. ಹೆಬ್ರೋನಿಗೂ ಲಿಬ್ನಕ್ಕೂ ಅದರ ಅರಸನಿಗೂ ಮಾಡಿದ ಹಾಗೆಯೇ ದೆಬೀರಕ್ಕೂ ಅದರ ಅರಸನಿಗೂ ಮಾಡಿದನು.

40ಹೀಗೆ ಯೆಹೋಶುವನು ಸಮಸ್ತ ಬೆಟ್ಟಗಳ ದೇಶವನ್ನೂ ತೆಂಕಣ ದೇಶವನ್ನೂ ತಗ್ಗಿನ ದೇಶವನ್ನೂ ನೀರು ಬುಗ್ಗೆಗಳ ದೇಶವನ್ನೂ ಅವುಗಳ ಅರಸು ಗಳೆಲ್ಲರನ್ನೂ ಒಬ್ಬನನ್ನಾದರೂ ಉಳಿಸದೆ ಹೊಡೆದು ಇಸ್ರಾಯೇಲಿನ ದೇವರಾದ ಕರ್ತನು ಆಜ್ಞಾಪಿಸಿದ ಹಾಗೆಯೇ ಶ್ವಾಸವುಳ್ಳದ್ದನ್ನೆಲ್ಲಾ ಸಂಪೂರ್ಣವಾಗಿ ನಾಶ ಮಾಡಿದನು.

41ಯೆಹೋಶುವನು ಕಾದೇಶ್‌ ಬರ್ನೇಯದಿಂದ ಗಾಜದ ವರೆಗೂ ಇರುವವರನ್ನೂ ಗೋಷೆನಿನ ಸಮಸ್ತ ದೇಶವನ್ನೂ ಗಿಬ್ಯೋನಿನ ವರೆಗೆ ಹೊಡೆದುಬಿಟ್ಟನು.

42ಯೆಹೋಶುವನು ಈ ಸಮಸ್ತ ಅರಸುಗಳನ್ನೂ ಅವರ ದೇಶವನ್ನೂ ಒಂದೇ ಸಾರಿ ತೆಗೆದುಕೊಂಡನು. ಯಾಕಂದರೆ ಇಸ್ರಾಯೇಲಿನ ದೇವ ರಾದ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧ ಮಾಡಿದನು.

43ಆಗ ಯೆಹೋಶುವನು ಇಸ್ರಾಯೇಲ್ಯ ರೆಲ್ಲರ ಸಂಗಡ ಗಿಲ್ಗಾಲಿನಲ್ಲಿರುವ ಪಾಳೆಯಕ್ಕೆ ಹಿಂತಿರುಗಿ ಬಂದನು.

ಯೆಹೋಶುವ 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी