ವಿಮೋಚನಕಾಂಡ 12:16

ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 12

14ಈ ದಿನವು ನಿಮಗೆ ಜ್ಞಾಪಕಾರ್ಥವಾಗಿರುವದು; ನೀವು ಇದನ್ನು ಕರ್ತನಿಗೆ ಹಬ್ಬವಾಗಿ ತಲತಲಾಂತರ ಗಳಲ್ಲಿ ಆಚರಿಸಬೇಕು; ಇದನ್ನು ನಿತ್ಯ ಶಾಸನದಂತೆ ಎಂದೆಂದಿಗೂ ಆಚರಿಸಬೇಕು.

15ಏಳು ದಿನಗಳ ವರೆಗೆ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಹಾಕಬೇಕು; ಮೊದಲನೆಯ ದಿನದಿಂದ ಏಳ ನೆಯ ದಿನದ ವರೆಗೆ ಹುಳಿರೊಟ್ಟಿಯನ್ನು ತಿನ್ನುವವರು ಇಸ್ರಾಯೇಲಿನೊಳಗಿಂದ ತೆಗೆದು ಹಾಕಲ್ಪಡಬೇಕು.

16ಇದಲ್ಲದೆ ಮೊದಲನೆಯ ದಿನದಲ್ಲಿ ಪರಿಶುದ್ಧ ಸಭೆಯೂ ಏಳನೆಯ ದಿನದಲ್ಲಿ ಪರಿಶುದ್ಧ ಸಭೆಯೂ ನಿಮಗೆ ಇರಬೇಕು. ಊಟಮಾಡುವದನ್ನು ಬಿಟ್ಟು ಆ ದಿನಗಳಲ್ಲಿ ಯಾವ ತರವಾದ ಕೆಲಸವನ್ನೂ ಮಾಡ ಬಾರದು.

17ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬ ವನ್ನು ಆಚರಿಸಬೇಕು. ಆ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತದೇಶದೊಳಗಿಂದ ಹೊರಗೆ ಬರ ಮಾಡಿದ್ದೇನೆ; ಆದಕಾರಣ ನಿಮ್ಮ ಸಂತತಿಗಳಲ್ಲಿ ಸದಾ ಕಾಲಕ್ಕೂ ಒಂದು ಶಾಸನವಾಗಿ ಈ ದಿನವನ್ನು ನೀವು ಆಚರಿಸಬೇಕು.

18ಮೊದಲನೆಯ ತಿಂಗಳಿನಲ್ಲಿ ಅದೇ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲದಿಂದ ಆ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದ ವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು.

ವಿಮೋಚನಕಾಂಡ 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी