೧ ಸಮುವೇಲನು 13:3

ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ಕೇಳಿಬಂತು. ಆದದರಿಂದ ಸೌಲನು ದೇಶದಲ್ಲೆಲ್ಲಾ ಇಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 13

1ಸೌಲನು ಒಂದು ವರುಷ ಆಳಿದನು;ಇಸ್ರಾಯೇಲ್ಯರನ್ನು ಎರಡು ವರುಷ ಆಳಿ ದಾಗ ಸೌಲನು ಇಸ್ರಾಯೇಲ್ಯರಲ್ಲಿ ಮೂರು ಸಾವಿರ ಜನರನ್ನು ಆದುಕೊಂಡನು.

2ಮೂರು ಸಾವಿರ ಜನರಲ್ಲಿ ಎರಡು ಸಾವಿರ ಜನರು ಸೌಲನು ಇರುವ ಮಿಕ್ಮಾಷಿ ನಲ್ಲಿಯೂ ಬೇತೇಲಿನ ಪರ್ವತದಲ್ಲಿಯೂ ಇದ್ದರು; ಸಾವಿರ ಜನರು ಯೋನಾತಾನನ ಸಂಗಡ ಬೆನ್ಯಾವಿಾನ್‌ ದೇಶದ ಗಿಬೆಯದಲ್ಲಿದ್ದರು. ಉಳಿದ ಜನರನ್ನು ಅವರ ವರ ಡೇರೆಗಳಿಗೆ ಕಳುಹಿಸಿಬಿಟ್ಟನು.

3ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ಕೇಳಿಬಂತು. ಆದದರಿಂದ ಸೌಲನು ದೇಶದಲ್ಲೆಲ್ಲಾ ಇಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.

4ಫಿಲಿಷ್ಟಿಯರ ಠಾಣ ವನ್ನು ಸೌಲನು ಹೊಡೆದನೆಂದೂ ಫಿಲಿಷ್ಟಿಯರಿಗೆ ಇಸ್ರಾಯೇಲ್ಯರು ಅಸಹ್ಯವಾದವರಾದರೆಂದೂ ಸಮಸ್ತ ಇಸ್ರಾಯೇಲ್ಯರು ಕೇಳಿದಾಗ ಸೌಲನ ಹಿಂದೆ ಹೋಗಲು ಗಿಲ್ಗಾಲಿಗೆ ಕರೆಸಿಕೊಳ್ಳಲ್ಪಟ್ಟರು.

5ಆಗ ಇಸ್ರಾಯೇಲ್ಯರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ ಆರು ಸಾವಿರ ಕುದುರೆ ರಾಹುತರೂ ಸಮುದ್ರತೀರದ ಮರಳಷ್ಟು ಜನವೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳುಕೊಂಡರು.

೧ ಸಮುವೇಲನು 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी