೨ ಪೂರ್ವಕಾಲವೃತ್ತಾಂತ 33:6

ಬೆನ್‌ ಹಿನ್ನೋಮ್‌ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 33

4ಇದ ಲ್ಲದೆ--ಯೆರೂಸಲೇಮಿನಲ್ಲಿ ನನ್ನ ಹೆಸರು ಯುಗ ಯುಗಕ್ಕೂ ಇರುವದೆಂದು ಕರ್ತನು ಹೇಳಿದ ಕರ್ತನ ಆಲಯದಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.

5ಕರ್ತನ ಆಲಯದ ಎರಡು ಅಂಗಳಗಳಲ್ಲಿ ಆಕಾಶದ ಎಲ್ಲಾ ಸೈನ್ಯಕ್ಕೋಸ್ಕರ ಬಲಿಪೀಠಗಳನ್ನು ಕಟ್ಟಿಸಿದನು.

6ಬೆನ್‌ ಹಿನ್ನೋಮ್‌ ಮಗನ ತಗ್ಗಿನಲ್ಲಿ ತನ್ನ ಮಕ್ಕಳನ್ನು ಬೆಂಕಿ ದಾಟುವಂತೆ ಮಾಡಿದನು; ಮೇಘಮಂತ್ರ ಸರ್ಪ ಮಂತ್ರಗಳನ್ನೂ ಮಾಟವನ್ನು ಮಾಡಿದನು; ಯಕ್ಷಿಣಿ ಗಾರರ ಮಂತ್ರಗಾರರ ಬಳಿಯಲ್ಲೂ ವಿಚಾರಿಸಿದನು; ಕರ್ತನಿಗೆ ಕೋಪವನ್ನು ಎಬ್ಬಿಸುವಂತೆ ಆತನ ಸಮ್ಮುಖ ದಲ್ಲಿ ಬಹಳವಾಗಿ ಕೆಟ್ಟತನವನ್ನು ಮಾಡಿದನು.

7ದೇವರು--ಈ ಆಲಯದಲ್ಲಿಯೂ ಇಸ್ರಾಯೇಲಿನ ಸಮಸ್ತ ಗೋತ್ರಗಳಿಂದ ನಾನು ಆದುಕೊಂಡ ಯೆರೂ ಸಲೇಮಿನಲ್ಲಿಯೂ ನಾನು ನನ್ನ ಹೆಸರನ್ನು ಯುಗ ಯುಗಕ್ಕೂ ಇರಿಸುವೆನೆಂದೂ ಮೋಶೆಯಿಂದ

8ಬರೆ ಯಿಸಿದ ಸಮಸ್ತ ನ್ಯಾಯಪ್ರಮಾಣವೂ ಆಜ್ಞೆಗಳೂ ಕಟ್ಟಳೆಗಳೂ ಇವುಗಳ ಪ್ರಕಾರ ನಾನು ಅವರಿಗೆ ಆಜ್ಞಾಪಿಸಿದ್ದೆನ್ನೆಲ್ಲವನ್ನು ಅವರು ಮಾಡಲು ಜಾಗ್ರತೆ ಯಾಗಿದ್ದರೆ ನಾನು ನಿಮ್ಮ ಪಿತೃಗಳಿಗೋಸ್ಕರ ನೇಮಿಸಿದ ದೇಶದೊಳಗಿಂದ ಇಸ್ರಾಯೇಲಿನ ಪಾದವನ್ನು ನಾನು ಇನ್ನು ಮೇಲೆ ಚಲಿಸ ಮಾಡುವದಿಲ್ಲವೆಂದೂ ಆತನು ದಾವೀದನಿಗೂ ಅವನ ಮಗನಾದ ಸೊಲೊಮೋನ ನಿಗೂ ಹೇಳಿದ ದೇವರ ಆಲಯದಲ್ಲಿ ಅವನು ಕೆತ್ತಿದ ವಿಗ್ರಹವನ್ನು ಮಾಡಿಸಿ ಇರಿಸಿದನು.

೨ ಪೂರ್ವಕಾಲವೃತ್ತಾಂತ 33 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी