ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್.
22ಈ ಪತ್ರಿಕೆಯನ್ನು ಬರೆದ ತೆರ್ತ್ಯನೆಂಬ ನಾನು ನಿಮ್ಮನ್ನು ಕರ್ತನಲ್ಲಿ ವಂದಿಸುತ್ತೇನೆ.
23ನನಗೂ ಸಮಸ್ತ ಸಭೆಗೂ ಅತಿಥಿಸತ್ಕಾರವನ್ನು ಮಾಡುತ್ತಿರುವ ಗಾಯನು ನಿಮ್ಮನ್ನು ವಂದಿಸುತ್ತಾನೆ. ಈ ಪಟ್ಟಣದ ಖಜಾನೆಯ ಮೇಲ್ವಿಚಾರಕ ನಾಗಿರುವ ಎರಸ್ತನೂ ಸಹೋದರನಾದ ಕ್ವರ್ತನೂ ನಿಮಗೆ ವಂದನೆಗಳನ್ನು ಹೇಳುತ್ತಾರೆ.
24ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮ್ಮೆಲ್ಲರೊಂದಿಗಿರಲಿ. ಆಮೆನ್.
25ಪ್ರಕಟನೆಯಾದ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿ ಸುವದಕ್ಕೆ ಶಕ್ತನಾಗಿರುವಾತನಿಂದ
26ಅನಾದಿಯಿಂದ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸ ಲ್ಪಟ್ಟಿದೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ