ಯಾಜಕಕಾಂಡ 14:17

ತನ್ನ ಕೈಯಲ್ಲಿ ಮಿಕ್ಕಿದ ಎಣ್ಣೆಯನ್ನು ಯಾಜಕನು ಶುದ್ಧಪಡಿಸಿಕೊಳ್ಳವವನ ಬಲಗಿವಿಯ ತುದಿಗೂ ಮತ್ತು ಬಲಗೈಯ ಹೆಬ್ಬೆರಳಿಗೆ ಬಲಗಾಲಿನ ಹೆಬ್ಬೆರಳಿಗೆ ಹಚ್ಚ ಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 14

15ಯಾಜಕನು ಸೇರೆಣ್ಣೆಯಲ್ಲಿ ಸ್ವಲ್ಪ ತೆಗೆದುಕೊಂಡು ತನ್ನ ಸ್ವಂತ ಎಡ ಅಂಗೈಯಲ್ಲಿ ಹೊಯ್ಯಬೇಕು.

16ಯಾಜಕನು ತನ್ನ ಎಡಗೈಯಲ್ಲಿರುವ ಎಣ್ಣೆಯಲ್ಲಿ ತನ್ನ ಬಲಗೈ ಬೆರಳನ್ನು ಅದ್ದಿ ಬೆರಳಿನಿಂದ ಎಣ್ಣೆಯನ್ನು ಏಳುಸಾರಿ ಕರ್ತನ ಎದುರಿನಲ್ಲಿ ಚಿಮುಕಿಸ ಬೇಕು.

17ತನ್ನ ಕೈಯಲ್ಲಿ ಮಿಕ್ಕಿದ ಎಣ್ಣೆಯನ್ನು ಯಾಜಕನು ಶುದ್ಧಪಡಿಸಿಕೊಳ್ಳವವನ ಬಲಗಿವಿಯ ತುದಿಗೂ ಮತ್ತು ಬಲಗೈಯ ಹೆಬ್ಬೆರಳಿಗೆ ಬಲಗಾಲಿನ ಹೆಬ್ಬೆರಳಿಗೆ ಹಚ್ಚ ಬೇಕು.

18ಯಾಜಕನ ಕೈಯಲ್ಲಿ ಮಿಕ್ಕಿದ್ದ ಆ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ಯ ಬೇಕು. ಯಾಜಕನು ಅವನಿಗಾಗಿ ಕರ್ತನ ಎದುರಿನಲ್ಲಿ ಪ್ರಾಯಶ್ಚಿತ್ತಮಾಡಬೇಕು.

19ಇದಲ್ಲದೆ ಯಾಜಕನು ಪಾಪದ ಬಲಿಯನ್ನು ಸಮರ್ಪಿಸಿ ಶುದ್ಧಪಡಿಸಿಕೊಳ್ಳುವ ವನಿಗೋಸ್ಕರ ಅವನ ಅಶುದ್ಧತೆಗಾಗಿ ಪ್ರಾಯಶ್ಚಿತ್ತ ಮಾಡಬೇಕು; ತರುವಾಯ ಅವನು ದಹನಬಲಿಯನ್ನು ವಧಿಸಬೇಕು.

ಯಾಜಕಕಾಂಡ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी