ಯೆಹೋಶುವ 14:7

ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್‌ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು.

ಸಂದರ್ಭದೊಂದಿಗೆ ಓದಿ · ಯೆಹೋಶುವ 14

5ಕರ್ತನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲ್‌ ಮಕ್ಕಳು ಮಾಡಿ ದೇಶವನ್ನು ಪಾಲು ಹಂಚಿಕೊಂಡರು.

6ಯೂದನ ಮಕ್ಕಳು ಗಿಲ್ಗಾಲಿನಲ್ಲಿ ಯೆಹೋಶುವನ ಬಳಿಗೆ ಸೇರಿದರು. ಆಗ ಕೆನೆಜ್ಜೀಯನೂ ಯೆಫುನ್ನೆಯ ಮಗನೂ ಆದ ಕಾಲೇಬನು ಅವನಿಗೆ--ಕಾದೇಶ್‌ ಬರ್ನೇಯದಲ್ಲಿ ಕರ್ತನು ನನ್ನನ್ನೂ ನಿನ್ನನ್ನೂ ಕುರಿತು ದೇವರ ಮನುಷ್ಯನಾದ ಮೋಶೆಗೆ ಹೇಳಿದ ಮಾತನ್ನು ನೀನು ಬಲ್ಲೆ;

7ಕರ್ತನ ಸೇವಕನಾದ ಮೋಶೆಯು ದೇಶವನ್ನು ಪಾಳತಿ ನೋಡಲು ನನ್ನನ್ನು ಕಾದೇಶ್‌ ಬರ್ನೇಯದಿಂದ ಕಳುಹಿಸಿದಾಗ ನಾನು ನಾಲ್ವತ್ತು ವರುಷ ಪ್ರಾಯದವನಾಗಿದ್ದೆನು; ನನ್ನ ಹೃದಯದಲ್ಲಿ ಇದ್ದ ಹಾಗೆಯೇ ಅವನಿಗೆ ಒಂದು ಮಾತನ್ನು ತಿರಿಗಿ ತಕ್ಕೊಂಡು ಬಂದೆನು.

8ಆದಾಗ್ಯೂ ನನ್ನ ಸಂಗಡ ಹೋಗಿ ಬಂದ ನನ್ನ ಸಹೋದರರು ಜನರ ಹೃದಯ ವನ್ನು ಕರಗಿಸಿದರು. ಆದರೆ ನಾನು ನನ್ನ ದೇವರಾದ ಕರ್ತನನ್ನು ಪೂರ್ಣವಾಗಿ ಹಿಂಬಾಲಿಸಿದೆನು.

9ಆ ದಿನದಲ್ಲಿ ಮೋಶೆಯು ನನಗೆ--ನೀನು ನನ್ನ ದೇವರಾದ ಕರ್ತನನ್ನು ಪೂರ್ಣ ಮನಸ್ಸಿನಿಂದ ಹಿಂಬಾಲಿಸಿದ್ದರಿಂದ ನಿನ್ನ ಕಾಲು ತುಳಿದ ದೇಶವು ನಿನಗೂ ನಿನ್ನ ಮಕ್ಕಳಿಗೂ ಎಂದೆಂದಿಗೂ ಬಾಧ್ಯತೆಯಾಗಿರುವದು ಎಂದು ಆಣೆ ಇಟ್ಟು ಹೇಳಿದನು.

ಯೆಹೋಶುವ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी