ತರುವಾಯ ನೀನು ಆ ಹೋರಿಯನ್ನು ಕರ್ತನ ಮುಂದೆ ಸಭೆಯ ಗುಡಾರದ ಬಾಗಲಲ್ಲಿ ವಧಿಸಬೇಕು.
9ಆರೋನನಿಗೂ ಅವನ ಕುಮಾರರಿಗೂ ನಡುಕಟ್ಟುಗಳನ್ನು ಕಟ್ಟಿ ಅವರಿಗೆ ಕುಲಾಯಿಗಳನ್ನು ಇಡಬೇಕು. ಹೀಗೆ ಅವರಿಗೆ ಯಾಜಕ ಸೇವೆಯು ಶಾಶ್ವತ ಕಟ್ಟಳೆಯಾಗಿರುವದು. ಆರೋನ ನನ್ನೂ ಅವನ ಕುಮಾರರನ್ನೂ ನೀನು ಪ್ರತಿಷ್ಠೆ ಮಾಡಬೇಕು.
10ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಕುಮಾರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು.
11ತರುವಾಯ ನೀನು ಆ ಹೋರಿಯನ್ನು ಕರ್ತನ ಮುಂದೆ ಸಭೆಯ ಗುಡಾರದ ಬಾಗಲಲ್ಲಿ ವಧಿಸಬೇಕು.
12ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ರಕ್ತವನ್ನೆಲ್ಲಾ ಯಜ್ಞವೇದಿಯ ಅಡಿಯಲ್ಲಿ ಸುರಿಯಬೇಕು.
13ನೀನು ಕರುಳುಗಳನ್ನೂ ಅವುಗಳ ಮೇಲೆ ಇರುವ ಎಲ್ಲಾ ಕೊಬ್ಬನ್ನೂ ಕಲಿಜದ ಮೇಲೆ ಬರುವ ಕೊಬ್ಬನ್ನೂ ಎರಡು ಮೂತ್ರಜನಕಾಂಗಗಳನ್ನೂ ಅವುಗಳ ಮೇಲೆ ಇರುವ ಕೊಬ್ಬನ್ನೂ ತೆಗೆದುಕೊಂಡು ಯಜ್ಞವೇದಿಯ ಮೇಲೆ ಸುಡಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ