ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ.
6ನಿನ್ನ ಭಯಂಕರವಾದ ತ್ರಾಣದ ವಿಷಯ ವಾಗಿಯೂ ಅವರು ಹೇಳುವರು; ನಿನ್ನ ಮಹತ್ವವನ್ನು ನಾನು ಸಾರುವೆನು.
7ನಿನ್ನ ಬಹು ಒಳ್ಳೇತನದ ಜ್ಞಾಪಕವನ್ನು ಅವರು ನುಡಿಯುವರು; ನಿನ್ನ ನೀತಿಯ ನಿಮಿತ್ತ ಉತ್ಸಾಹಧ್ವನಿ ಮಾಡುವರು.
8ಕರ್ತನು ಕೃಪಾಳುವೂ ಅಂತಃಕರಣವೂ ದೀರ್ಘಶಾಂತಿಯೂ ಮಹಾಕರುಣೆಯುಳ್ಳವನೂ ಆಗಿದ್ದಾನೆ.
9ಕರ್ತನು ಸರ್ವರಿಗೂ ಒಳ್ಳೆಯವನು; ಆತನ ಅಂತಃಕರಣವು ಆತನ ಎಲ್ಲಾ ಕೆಲಸಗಳ ಮೇಲೆ ಅದೆ.
10ಓ ಕರ್ತನೇ, ನಿನ್ನ ಕೆಲಸಗಳೆಲ್ಲಾ ನಿನ್ನನ್ನು ಕೊಂಡಾಡುವವು; ನಿನ್ನ ಪರಿಶುದ್ಧರು ನಿನ್ನನ್ನು ಸ್ತುತಿಸುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ