ವಿಮೋಚನಕಾಂಡ 30:11

ಆಗ ಕರ್ತನು ಮಾತನಾಡಿ ಮೋಶೆಗೆ--

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 30

9ನೀವು ಅದರ ಮೇಲೆ ಬೇರೆ ಧೂಪವನ್ನಾಗಲಿ ದಹನಬಲಿಗಳನ್ನಾಗಲಿ ಆಹಾರಾರ್ಪಣೆಯನ್ನಾಗಲಿ ಅರ್ಪಿಸಬಾರದು. ಇಲ್ಲವೆ ಪಾನಾರ್ಪಣೆಯನ್ನು ಅದರ ಮೇಲೆ ಹೊಯ್ಯಬಾರದು.

10ಆರೋನನು ಅದರ ಕೊಂಬುಗಳಿಗೆ ವರುಷಕ್ಕೆ ಒಂದು ಸಾರಿ ಪ್ರಾಯಶ್ಚಿತ್ತದ ಬಲಿಯ ರಕ್ತದಿಂದ ಪ್ರಾಯಶ್ಚಿತ್ತ ಮಾಡಬೇಕು. ವರುಷಕ್ಕೊಂದು ಸಾರಿ ನಿಮ್ಮ ಸಂತತಿಗಳಲ್ಲೆಲ್ಲಾ ಅದನ್ನು ಮಾಡಬೇಕು. ಅದು ಕರ್ತನಿಗೆ ಅತಿಪರಿಶುದ್ಧವಾದದ್ದು.

11ಆಗ ಕರ್ತನು ಮಾತನಾಡಿ ಮೋಶೆಗೆ--

12ನೀನು ಇಸ್ರಾಯೇಲ್‌ ಮಕ್ಕಳ ಲೆಕ್ಕವನ್ನು ಅದರ ಸಂಖ್ಯೆಗೆ ಸರಿಯಾಗಿ ಎಣಿಸಿದಾಗ ಅವರಲ್ಲಿ ವ್ಯಾಧಿ ಉಂಟಾಗದ ಹಾಗೆ ಅವರನ್ನು ಕ್ರಮವಾಗಿ ಎಣಿಸಿ ಒಬ್ಬೊಬ್ಬನು ತನ್ನ ಪ್ರಾಣದ ವಿಮೋಚನೆಯ ಕ್ರಮವನ್ನು ಕರ್ತನಿಗೆ ಕೊಡಬೇಕು.

13ಎಣಿಸಲ್ಪಟ್ಟವರಲ್ಲಿ ಸೇರುವ ಪ್ರತಿ ಮನುಷ್ಯನು ಕೊಡಬೇಕಾದದ್ದು ಏನಂದರೆ: ಶೆಕೆಲಿಗೆ ಇಪ್ಪತ್ತು ಗೇರಾ ಪ್ರಕಾರವಾಗಿ ಪರಿಶುದ್ಧ ಆಲಯದ ಶೆಕೆಲಿನ ಮೇರೆಗೆ ಅರೆ ಶೆಕೆಲ್‌ ಕೊಡಬೇಕು. ಅರೆ ಶೆಕೆಲ್‌ ಕರ್ತನಿಗೆ ಅರ್ಪಿಸುವ ಕಾಣಿಕೆಯಾಗಿರಬೇಕು.

ವಿಮೋಚನಕಾಂಡ 30 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी