೧ ಸಮುವೇಲನು 16:2

ಆಗ ಸಮು ವೇಲನು--ನಾನು ಹೋಗುವದು ಹೇಗೆ? ಸೌಲನು ಅದನ್ನು ಕೇಳಿದರೆ ನನ್ನನ್ನು ಕೊಂದುಹಾಕುವನು ಅಂದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 16

1ಕರ್ತನು ಸಮುವೇಲನಿಗೆ--ಇಸ್ರಾಯೇ ಲಿನ ಅರಸನಾಗಿರದ ಹಾಗೆ ನಾನು ತಿರಸ್ಕರಿಸಿದ ಸೌಲನಿಗೋಸ್ಕರ ನೀನು ಎಷ್ಟರ ವರೆಗೆ ದುಃಖವುಳ್ಳವನಾಗಿರುವಿ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ, ಬೇತ್ಲೆಹೇಮಿನ ವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು; ಯಾಕಂದರೆ ನಾನು ಅವನ ಮಕ್ಕಳಲ್ಲಿ ಒಬ್ಬನನ್ನು ಅರಸನನ್ನಾಗಿ ಆದುಕೊಂಡೆನು ಅಂದನು.

2ಆಗ ಸಮು ವೇಲನು--ನಾನು ಹೋಗುವದು ಹೇಗೆ? ಸೌಲನು ಅದನ್ನು ಕೇಳಿದರೆ ನನ್ನನ್ನು ಕೊಂದುಹಾಕುವನು ಅಂದನು.

3ಅದಕ್ಕೆ ಕರ್ತನು--ನೀನು ಒಂದು ಕಡಸನ್ನು ನಿನ್ನ ಸಂಗಡ ತಕ್ಕೊಂಡುಹೋಗಿ--ನಾನು ಕರ್ತನಿಗೆ ಯಜ್ಞಮಾಡುವದಕ್ಕೆ ಬಂದೆನು ಎಂದು ಹೇಳಿ ಯಜ್ಞ ವನ್ನು ಅರ್ಪಿಸುವದಕ್ಕೆ ಇಷಯನನ್ನು ಕರೆಯಬೇಕು; ಆಗ ನೀನು ಮಾಡಬೇಕಾದದ್ದನ್ನು ನಾನು ನಿನಗೆ ತಿಳಿಸು ವೆನು. ನಾನು ನಿನಗೆ ಯಾವನ ಹೆಸರನ್ನು ಹೇಳು ತ್ತೇನೋ ಅವನನ್ನು ನೀನು ನನಗೋಸ್ಕರ ಅಭಿಷೇಕಿಸ ಬೇಕು ಅಂದನು.

4ಕರ್ತನು ಹೇಳಿದ ಪ್ರಕಾರ ಸಮುವೇಲನು ಮಾಡಿ ಬೇತ್ಲೆಹೇಮಿಗೆ ಬಂದನು. ಆಗ ಊರಿನ ಹಿರಿಯರು ಅವನ ಬರುವಿಕೆಯನ್ನು ಕಂಡು ನಡುಗಿ ಅವನಿಗೆ--ಸಮಾಧಾನವೋ ಅಂದರು.

೧ ಸಮುವೇಲನು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी