೨ ಥೆಸಲೊನೀಕದವರಿಗೆ 2:15

ಹೀಗಿರುವದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ, ನಾವು ಮಾತಿನಿಂದಾಗಲಿ ನಮ್ಮ ಪತ್ರಿಕೆ ಯಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಹಿಡಿದುಕೊಂಡಿರ್ರಿ.

ಸಂದರ್ಭದೊಂದಿಗೆ ಓದಿ · ೨ ಥೆಸಲೊನೀಕದವರಿಗೆ 2

13ಕರ್ತನಿಗೆ ಪ್ರಿಯರಾಗಿರುವ ಸಹೊದರರೇ, ನೀವು ಆತ್ಮನಿಂದ ಶುದ್ಧೀಕರಿಸಲ್ಪಟ್ಟವರಾಗಿ ಸತ್ಯದ ಮೇಲೆ ನಂಬಿಕೆಯನ್ನಿಟ್ಟು ರಕ್ಷಣೆಯನ್ನು ಪಡೆಯುವದಕ್ಕಾಗಿ ದೇವರು ನಿಮ್ಮನ್ನು ಆದಿಯಿಂದ ಆರಿಸಿಕೊಂಡದ್ದರಿಂದ ನಾವು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರಿಗೆ ಕೃತಜ್ಞತಾಸ್ತುತಿ ಮಾಡುವದಕ್ಕೆ ಬದ್ದರಾಗಿದ್ದೇವೆ

14ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರಭಾವವನ್ನು ಹೊಂದಿ ಕೊಳ್ಳಬೇಕೆಂದು ದೇವರು ನಮ್ಮ ಸುವಾರ್ತೆಯ ಮೂಲಕವಾಗಿ ನಿಮ್ಮನ್ನು ಅದಕ್ಕೆ ಕರೆದನು.

15ಹೀಗಿರುವದರಿಂದ ಸಹೋದರರೇ, ದೃಢವಾಗಿ ನಿಲ್ಲಿರಿ, ನಾವು ಮಾತಿನಿಂದಾಗಲಿ ನಮ್ಮ ಪತ್ರಿಕೆ ಯಿಂದಾಗಲಿ ನಿಮಗೆ ಕಲಿಸಿದ ಬೋಧನೆಗಳನ್ನು ನೀವು ಭದ್ರವಾಗಿ ಹಿಡಿದುಕೊಂಡಿರ್ರಿ.

16ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರ ಹಿಸಿದ ನಮ ಕರ್ತನಾದ ಯೇಸು ಕ್ರಿಸ್ತನೂ ನಮ್ಮ ತಂದೆಯಾದ ದೇವರೂ

17ನಿಮ್ಮ ಹೃದಯಗಳನ್ನು ಸಂತೈಸಿ ಸಕಲ ಸದ್ವಾಕ್ಯದಲ್ಲಿಯೂ ಸತ್ಕಾರ್ಯದಲ್ಲಿಯೂ ದೃಢಪಡಿಸಲಿ.

೨ ಥೆಸಲೊನೀಕದವರಿಗೆ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी